ಬೆಂಗಳೂರು: ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿ ಸಾಲು ಸಾಲು ಯಶಸ್ವಿ ಸಿನಿಮಾಗಳಲ್ಲಿ ನಟಿಸಿದ ರಶ್ಮಿಕಾ ಮಂದಣ್ಣ, ಟಾಲಿವುಡ್ ಎಂಟ್ರಿ ಕೊಟ್ಟು ಸೂಪರ್ ಸ್ಟಾರ್ ಮಹೇಶ್ ಬಾಬು, ಅಲ್ಲು ಅರ್ಜುನ್, ನಿತಿನ್, ವಿಜಯ್ ದೇವರಕೊಂಡ ಮತ್ತು ಹಲವು ಸ್ಟಾರ್ ನಟರೊಂದಿಗೆ ನಟಿಸಿ ಅಗ್ರಶ್ರೇಯಾಂಕಿತ ನಾಯಕಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.
ಇನ್ನೂ ಇತ್ತೀಚಿಗೆ ತಮಿಳು ಚಿತ್ರರಂಗ ಪ್ರವೇಶಿಸಿದ ರಶ್ಮಿಕಾ ಮಂದನಾ, ಈಗ ಬಾಲಿವುಡ್ ನಲ್ಲೂ ಕೂಡ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಹೌದು ಬಾಲಿವುಡ್ ಯಂಗ್ ಹೀರೊ ಸಿದ್ಧಾರ್ಥ್ ಮಲ್ಹೋತ್ರಾ ಅಭಿನಯದ ‘ಮಿಷನ್ ಮಜ್ನು’ ಚಿತ್ರದಲ್ಲಿ ರಶ್ಮಿಕಾ ನಾಯಕಿ ಆಗುವ ಅವಕಾಶ ಸಿಕ್ಕಿಸಿಕೊಂಡಿದ್ದಾರೆ.
ಈ ಸಿನಿಮಾ 1970 ರ ದಶಕದ ರಹಸ್ಯ ಕಾರ್ಯಾಚರಣೆಯನ್ನು ಆಧರಿಸಿದೆ. ಈ ಸಿನಿಮಾದಲ್ಲಿ ಸಿದ್ಧಾರ್ಥ್ ‘ರಾ’ ಏಜೆಂಟ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಯಾಡ್ಸ್ ಫಿಲ್ಮ್ ಮೇಕರ್ ಶಾಂತನು ಬಾಚಿ ಅವರು ಈ ಸಿನಿಮಾದ ಮೂಲಕ ನಿರ್ದೇಶಕರಾಗಿ ಪರಿಚಯವಾಗುತ್ತಿದ್ದಾರೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ರೋನಿ ಸ್ಕ್ರೂವಾಲಾ ನಿರ್ಮಿಸುತ್ತಿದ್ದಾರೆ.
ಈ ಚಿತ್ರ ಶೀಘ್ರದಲ್ಲೇ ಚಿತ್ರೀಕರಣ ಶುರುವಾಗಲಿದ್ದು, ಈ ಸಿನಿಮಾಕ್ಕಿಂತ ಮುಂಚಿತವಾಗಿ, ಶಾಹಿದ್ ಕಪೂರ್ ಅಭಿನಯದ ಜರ್ಸಿ ಹಿಂದಿ ರಿಮೇಕ್ನಲ್ಲಿ ರಶ್ಮಿಕಾಗೆ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ, ಕೆಲವು ಕಾರಣಗಳಿಂದಾಗಿ, ಅವರು ಈ ಸಿನಿಮಾದಲ್ಲಿ ನಟಿಸಲು ಬೇಡ ಎಂದು ಹೇಳಿದ್ದರು.
ರಶ್ಮಿಕಾ ಮಂದನಾ ಪ್ರಸ್ತುತ ಕನ್ನಡದ ದೃವ ಸರ್ಜಾ ಅಭಿನಯದ ಪೊಗರು ಹಾಗು ತೆಲುಗಿನ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ’ ಸಿನಿಮಾದಲ್ಲಿ ನಟಿಸುತ್ತಿದ್ದು, ಶೀಘ್ರದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.