ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುವ ಕಾರಣ ತಿಳಿಸಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಡಿ.10 ರಂದು ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದ್ದು, ದರ್ಶನ್‌ಗೆ ಮತ್ತೆ ಜೈಲೇ ಗತಿ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಈ ಬೆನ್ನಲ್ಲೇ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ದರ್ಶನ್ ಪರ ವಕೀಲರು ಹೂಕೀರ್ಡರ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕಳೆದ ಒಂದು ವಿಚಾರಣೆಯ ಸಂದರ್ಭದಲ್ಲಿ ದರ್ಶನ್ ಅವರ ಆರೋಗ್ಯದಲ್ಲಿ ಬಿಪಿ ಏರುಪೇರು ಆಗುತ್ತಿದ್ದು, ಹೀಗಾಗಿ ಸರ್ಜರಿ ಮಾಡಲು ಆಗುತ್ತಿಲ್ಲ ಎಂದು ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು.ಪದೇ ಪದೇ ರಕ್ತದೊತ್ತಡ ಏರುಪೇರಿನಿಂದಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿಲ್ಲ ಎಂದು ಈಗಾಗಲೇ ದರ್ಶನ್ ಪರ ವಕೀಲರು ಕೋರ್ಟಿಗೆ ಮಾಹಿತಿ ನೀಡಿದ್ದರು.
ಆದ್ದರಿಂದ ಶಸ್ತ್ರಚಿಕಿತ್ಸೆಗಾಗಿ ಮೆಡಿಕಲ್ ಬೇಲ್ ಪಡೆದು ಜೈಲಿನಿಂದ ಹೊರಬಂದಿರುವ ದರ್ಶನ್ ಜಾಮೀನು ಅವಧಿ ವಿಸ್ತರಣೆ ಮಾಡಲು ಮಧ್ಯಂತರ ಆದೇಶ ನೀಡಬೇಕೆಂದು ದರ್ಶನ್ ಪರ ವಕೀಲರು ಕೋaರ್ಟ್ ಗೆ ಮೊರೆ ಹೋಗಿದ್ದಾರೆ. ಶಸ್ತ್ರಚಿಕಿತ್ಸೆ ಮಾಡುವವರೆಗೂ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ಸಾಧ್ಯವಿಲ್ಲ. ಹೀಗಾಗಿ ಬೇಲ್ ಅವಧಿ ವಿಸ್ತರಿಸಲು ಮಧ್ಯಂತರ ಆದೇಶ ನೀಡಬೇಕೆಂದು ವಕೀಲರು ಕೋರ್ಟ್ ಮೆಟ್ಟಿಲೇರಿದ್ದಾರೆ.