ಬೆಂಗಳೂರು : ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರ ಗಾಯಗೊಂಡಿದ್ದು, ನಟನಿಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಅವರಿಗೆ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಅವರ ತೊಡೆಯ ಭಾಗದಲ್ಲಿ ಮೂಳೆ ಮುರಿದಿದ್ದು, ಆಪರೇಶನ್ ಮಾಡಲಾಗಿದೆ.
ಸದ್ಯ ನಟ ಸಂಚಾರಿ ವಿಜಯ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ವೈದ್ಯ ಡಾ. ಅನಿಲ್ ಕುಮಾರ್ ಅವರು ತಿಳಿಸಿದ್ದಾರೆ.