Sachin Tendulkar son engagement : ಕ್ರಿಕೆಟ್ ದಂತಕಥೆ, ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ( Arjun Tendulkar) – ಸಾನಿಯಾ ಚಂದೋಕ್ (Saaniya Chandok) ಅವರೊಂದಿಗೆ ಎಂಗೇಜ್‌ಮೆಂಟ್ (Engagement) ಮಾಡಿಕೊಂಡಿದ್ದಾರೆ.
ಹೌದು, ಸಾನಿಯಾ ಅವರು ಮುಂಬೈನ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳಾಗಿದ್ದು, ಎರಡೂ ಕಡೆಯ ಆಪ್ತ ಸ್ನೇಹಿತರು & ಕುಟುಂಬ ಸದಸ್ಯರು ಭಾಗವಹಿಸಿದ್ದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ನೆರವೇರಿದೆ ಎನ್ನಲಾಗಿದೆ.
ಈ ಬಗ್ಗೆ ತೆಂಡೂಲ್ಕರ್ ಅಥವಾ ಘಾಯ್ ಕುಟುಂಬ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ ನಿಶ್ಚಿತಾರ್ಥಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮಾತ್ರ ಹಾಜರಿದ್ದರು ಎನ್ನಲಾಗಿದೆ. ಅರ್ಜುನ್ ಇದುವರೆಗೆ IPL, ರಣಜಿ ಆಡಿದ್ದಾರೆ.




