ಬೆಂಗಳೂರು: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್, ತಮ್ಮ ಸಾವಿನಲ್ಲೂ 7 ಜನರಿಗೆ ಜೀವದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
ಹೌದು, ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ಡೆಡ್ ಆಗಿದ್ದರಿಂದ ನಟ ವಿಜಯ್ ಅವರ 7 ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಕಣ್ಣು, ಪಿತ್ತಕೋಶ, ಮೂತ್ರಪಿಂಡ, ಹೃದಯದ ಕವಾಟಗಳನ್ನು ದಾನ ಮಾಡಲಾಗಿದ್ದು, 7 ಜನರ ಜೀವ ಉಳಿಸುವ ಕೆಲಸ ಸಾಗಿದೆ.
ಹೀಗಾಗಲೇ ಸಂಬಂಧಪಟ್ಟ ಆಸ್ಪತ್ರೆಗಳು ನಟ ಸಂಚಾರಿ ವಿಜಯ್ ಅವರ ಅಂಗಾಂಗ ತೆಗೆದುಕೊಂಡು ಹೋಗಿದ್ದು, ಅಲ್ಲಿ ಕಸಿ ನಡೆಯುತ್ತಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.