ಟೀಮ್ ಇಂಡಿಯಾ ಕ್ರಿಕೆಟರ್ ಶುಭ್ಮನ್ ಗಿಲ್ ಮತ್ತು ಸಾರಾ ತೆಂಡುಲ್ಕರ್ ನಡುವೆ ಲವ್ ಬ್ರೇಕ್ ಅಪ್ ಆದ ಸುದ್ದಿ ಹರಿದಾಡುತ್ತಿದೆ. ಈ ಮಧ್ಯೆ ಗಿಲ್ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಸ್ಟೋರೆಂಟ್ನಲ್ಲಿನರುವ ವಿಡಿಯೋವೊಂದು ವೈರಲ್ ಆಗಿದೆ.

ರೆಸ್ಟೋರೆಂಟ್‌ನಲ್ಲಿ ಇಬ್ಬರೂ ಒಟ್ಟಿಗೆ ಕುಳಿತಿರುವುದನ್ನು ಅಭಿಮಾನಿಯೊಬ್ಬರು ಗಮನಿಸಿ ಟಿಕ್‌ಟಾಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಇಬ್ಬರೂ ಒಟ್ಟಿಗೆ ಊಟ ಮಾಡುತ್ತಿರುವುದು ಕಂಡುಬಂದಿದ್ದು, ಡೇಟಿಂಗ್ ಸುದ್ದಿ ವೈರಲ್ ಆಗಿದೆ.
22 ವರ್ಷದ ಗಿಲ್, ತನಗಿಂತ ಐದು ವರ್ಷ ದೊಡ್ಡವಳಾದ ಸಾರಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಜೊತೆಗೆ ಗಿಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.




