ಬೆಂಗಳೂರು: ಚಂದನವನದ ಹಿರಿಯ ಪೋಷಕ ನಟ ಶನಿಮಹಾದೇವಪ್ಪ(90) ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಶನಿಮಹಾದೇವಪ್ಪ ಅವರು ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಕವಿರತ್ನ ಕಾಳಿದಾಸ,ರೆಬೆಲ್ ಸ್ಟಾರ್ ಅಂಬರೀಷ್ ಅಭಿನಯದ ಒಂಟಿ ಸಲಗ ಸಿನಿಮಾ ಸೇರಿ ಡಾ.ರಾಜ್ ಕುಮಾರ್ ಅವರ 150 ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ಇವರು, 550ಕ್ಕೂ ಹೆಚ್ಚು ಚಿತ್ರಗಳಿಗೆ ಬಣ್ಣ ಹಚ್ಚಿದ್ದರು. ಹಿರಿಯ ಕಲಾವಿದ ಇನ್ನಿಲ್ಲ ಎಂಬ ಸುದ್ದಿ ಕೇಳಿ ಚಂದನವನದ ಕಲಾವಿದರು ಕಂಬನಿ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.