ಚಾಮರಾಜನಗರ: ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಚಾಮರಾಜನಗರದ ಶಿವನಸಮುದ್ರಕ್ಕೆ ಭೇಟಿ ನೀಡಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಗಣಪತಿ ದೇವಸ್ಥಾನ, ಮಧ್ಯರಂಗ ಹಾಗೂ ಮೀನಾಕ್ಷಿ ಸಮೇತ ಸೋಮೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಚಕ್ರ ದರ್ಶನ ಪಡೆದು ಆದಿಶಕ್ತಿ ಮಾರಮ್ಮ ದೇವಸ್ಥಾನಕ್ಕೆ ಸೀರೆ ಸಮರ್ಪಿಸಿದರು.
ಕೆಲ ದಿನಗಳ ಹಿಂದೆ ಶಿವಣ್ಣ ದಂಪತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಮುಡಿ ಕೊಟ್ಟಿದ್ದರು. ಇದೀಗ ಶಿವನಸಮುದ್ರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿವರಾಜ್ ಕುಮಾರ್ ಶೀಘ್ರದಲ್ಲಿ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿದು, ಅದಕ್ಕೂ ಮುನ್ನ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.