ಬೆಂಗಳೂರು: ಹಿರಿಯ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಗೀತಾ ಶಿವಕುಮಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. ಗೀತಾ ಅವರ ಸಹೋದರ ಸಚಿವ ಮಧು ಬಂಗಾರಪ್ಪ ಅವರು ಶಸ್ತ್ರಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ನಾಯಕರ ಸಭೆಯಲ್ಲಿ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ನಾನು ಬೆಳಿಗ್ಗೆ ಈ ಕಾರ್ಯಕ್ರಮಕ್ಕೆ ಬರಬೇಕಿತ್ತು, ಆದರೆ ನನಗೆ ಬರಲು ಸಾಧ್ಯವಾಗಲಿಲ್ಲ. ಸಹೋದರಿ ಗೀತಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ನಾನು ಬರಲು ಸಾಧ್ಯವಾಗಲಿಲ್ಲ ಎಂದರು.
ಅಲ್ಲದೇ ಗೀತಾ ಶಿವರಾಜಕುಮಾರ ಅವರಿಗೆ 2 ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿದೆ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.