ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ, ಲಿಬ್ರಾ ಪ್ರೊಡಕ್ಷನ್’ ನಿರ್ಮಾಣ ಸಂಸ್ಥೆಯ ಮಾಲೀಕ ರವೀಂದ್ರ ಚಂದ್ರಶೇಖರ್ ಮತ್ತು ಕಿರುತೆರೆ ನಟಿ ಕಮ್ ನಿರೂಪಕಿ ಮಹಾಲಕ್ಷ್ಮೀ ಸೆಪ್ಟೆಂಬರ್ 1 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಮದುವೆ ಬಳಿಕ ಅವರೇ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಸಿನಿಮಾವೊಂದರ ಸೆಟ್‌ನಲ್ಲಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮಹಾಲಕ್ಷ್ಮಿ ಮತ್ತು ರವೀಂದರ್ ಇಬ್ಬರಿಗೂ ಇದು 2ನೇ ಮದುವೆ. ಮಹಾಲಕ್ಷ್ಮೀಗೆ ಈಗಾಗಲೇ ಒಬ್ಬ ಮಗನಿದ್ದಾನೆ. ಈ ಜೋಡಿಯ ಮದುವೆ ಫೋಟೋ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು ‘ಹಣದಿಂದ ಏನು ಬೇಕಾದರೂ ಸಾಧ್ಯ’ ಎಂದು ತಮಾಷೆಯ ಕಾಮೆಂಟ್ ಮಾಡುತ್ತಿದ್ದಾರೆ.
ಇನ್ನು, ನಟಿ ಮಹಾಲಕ್ಷ್ಮೀ ಅವರು ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ವಾಣಿ ರಾಣಿ, ಆಫೀಸ್, ಚೆಲ್ಲಮೇ, ಉಥಿರಿಪೊಕ್ಕಳ್, ಒರು ಕೈ ಒಸೈ ಸೇರಿದಂತೆ ಅನೇಕ ಧಾರವಾಹಿಗಳಲ್ಲಿ ನಟಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.