ವಿಜಯನಗರ: ದಿವಂಗತ ನಟ ಪುನೀತ್ ರಾಜ್ ಕುಮಾರ್ (ಅಪ್ಪು) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಜೇಮ್ಸ್’ ಟೀಸರ್ ನಿನ್ನೆ ಬಿಡುಗಡೆಯಾಗಿದ್ದು, ಎಲ್ಲೆಡೆ ಭರ್ಜರಿ ಸದ್ದು ಮಾಡುತ್ತಿದೆ.
ಅಪ್ಪು ಅಭಿನಯದ ಜೇಮ್ಸ್ ಚಿತ್ರದ ನಿರ್ದೇಶಕರಾದ ಕಿಶೋರ್ ಪತ್ತಿಕೊಂಡ ವಿಜಯನಗರದ ಹೊಸಪೇಟೆಯವರಾಗಿದ್ದು, ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಹೊಸಪೇಟೆಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿತ್ತು.
ಇನ್ನು, ಅಪ್ಪು ಅಭಿನಯದ ಜೇಮ್ಸ್ ಚಿತ್ರದ ಟೀಸರ್ ನೋಡಿದ ಬಳಿಕ ಮನೆಗೆ ತೆರಳಿದ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಕನಕ ಎಂಬ ಅಪ್ಪು ಅಭಿಮಾನಿಯೊಬ್ಬ ಎದೆ ಕುಯ್ದುಕೊಂಡು ಅಪ್ಪು ಎಂದು ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.