ಕನ್ನಡದ ಖ್ಯಾತ ನಟಿ ಪವಿತ್ರ ಲೋಕೇಶ್ ಹೆಸರನ್ನು ಎಲ್ಲರು ಕೇಳಿಯೇ ಇರುತ್ತೀರಿ. ಸ್ಯಾಂಡಲ್ವುಡ್ನಲ್ಲಿ ತಮ್ಮದೇ ಆದ ಅಭಿನಯದ ಮೂಲಕವೇ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡಿದ್ದ, ನಟಿ ಪವಿತ್ರ ಲೋಕೇಶ್ ತಮಿಳು, ತೆಲುಗು ಸಿನಿಮಾಗಳಲ್ಲೂ ನಟಿಸಿ ಖ್ಯಾತಿ ಗಳಿಸಿದ್ದಾರೆ.
ನಟಿ ಪವಿತ್ರ ಲೋಕೇಶ್ ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ನಟಿಯಾಗಿದ್ದು, ನಟ ಮೈಸೂರು ಲೋಕೇಶ್ ಅವರ ಮಗಳು. ತನ್ನ 16 ನೇ ವಯಸ್ಸನಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಪವಿತ್ರ ಲೋಕೇಶ್ 150 ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದು, 2006ರಲ್ಲೀ ತೆರೆಕಂಡ ಕನ್ನಡದ ಚಿತ್ರವಾದ ನಾಯಿ ನೆರಳು ಚಿತ್ರದಲ್ಲಿನ ಅಭಿನಯಕ್ಕಾಗಿ ಅವರಿಗೆ ಅತ್ಯುತ್ತಮ ನಟನೆಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಇದೀಗ ಖ್ಯಾತ ಬಹುಭಾಷಾ ನಟಿ ಪವಿತ್ರ ಲೋಕೇಶ್ ಅವರ ಬಗ್ಗೆ ಸಖತ್ ಸುದ್ದಿ ಹರಿದಾಡುತ್ತಿದ್ದು, ತೆಲುಗಿನ ಹಿರಿಯ ನಟನೊಂದಿಗೆ ಮತ್ತೊಂದು ಮದುವೆ ಆಗಲಿದ್ದಾರೆ ಎಂಬ ಗುಸುಗುಸು ಹಬ್ಬಿದೆ.
ಟಾಲಿವುಡ್ ಸೂಪರ್ ಸ್ಟಾರ್ ಅಣ್ಣನ ಜೊತೆ ಪವಿತ್ರ ಲೋಕೇಶ್ ನಾಲ್ಕನೇ ಮದುವೆ?
ಹೌದು, ಕಳೆದ ನಾಲ್ಕೈದು ದಿನಗಳಿಂದ ಕನ್ನಡದ ಖ್ಯಾತ ನಟಿ ಪವಿತ್ರ ಲೋಕೇಶ್ ತೆಲುಗಿನ ಹಿರಿಯ ನಟ ನರೇಶ್ ಅವರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇವರಿಬ್ಬರು ಬಹಳ ದಿನಗಳಿಂದ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದಾರೆ ಎಂದು ಹೇಳಲಾಗಿದೆ.

ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಅಣ್ಣನೇ ಹಿರಿಯ ನಟ ನರೇಶ್. ಇವರು ಈಗಾಗಲೇ ಮೂರು ಮದುವೆ ಮಾಡಿಕೊಂಡು ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಈಗ ನಟಿ ಪವಿತ್ರ ಲೋಕೇಶ್ ಅವರೊಂದಿಗೆ ನಾಲ್ಕನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳು ಶಾಕ್ ಆಗಿದ್ದಾರೆ.
ಕನ್ನಡದ ಖ್ಯಾತ ನಟ, ನಿರ್ದೇಶಕನೊಂದಿಗೆ ಪವಿತ್ರಾ ಲೋಕೇಶ್ 2ನೇ ವಿವಾಹ:

ಪವಿತ್ರಾ ಲೋಕೇಶ್ ಈಗಾಗಲೇ 2007ರಲ್ಲಿ ಖ್ಯಾತ ನಟ, ನಿರ್ದೇಶಕ ಸುಚೇಂದ್ರ ಪ್ರಸಾದ್ ಅವರನ್ನು 2ನೇ ವಿವಾಹವಾಗಿದ್ದು, ಇವರಿಗೆ ಇಬ್ಬರು ಮುದ್ದಾದ ಮಕ್ಕಳು ಸಹ ಇದ್ದಾರೆ. ಆದರೆ ಈಗ ಇಬ್ಬರೂ ಜೊತೆಯಾಗಿಲ್ಲ ಎನ್ನಲಾಗಿದೆ. ಈ ಬಗ್ಗೆ ಅಧಿಕೃತವಾಗಿ ಯಾರೂ ಏನೂ ಹೇಳಿಕೆ ನೀಡಿಲ್ಲ.




