ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು ಕೊರೋನಾ ಪಾಸಿಟಿವ್ ಬಂದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು, ‘ತಡವಾಗಿ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತು. ನಂತರ ಕೊರೋನಾ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಹೇಳಿದ್ದಾರೆ.
ಕಳೆದ ವರ್ಷ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತು. ನಂತರ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment