ಇಂದು ಡಿಂಪಲ್ ಕ್ವೀನ್ ರಚಿತಾ ರಾಮ್ ಅವರಿಗೆ ಜನ್ಮದಿನದ ಸಂಭ್ರಮ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಾಯಕ ನಟಿ ಡಿಂಪಲ್ ಕ್ವೀನ್ ಎಂದೇ ಕರೆಯಲ್ಪಡುವ ಗುಳಿ ಕೆನ್ನೆ ಬೆಡಗಿ ರಚಿತಾ ರಾಮ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಕನ್ನಡದ ಎಲ್ಲಾ ಪ್ರಮುಖ ನಟರಾದ  ದರ್ಶನ್​, ಕಿಚ್ಚ…

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಾಯಕ ನಟಿ ಡಿಂಪಲ್ ಕ್ವೀನ್ ಎಂದೇ ಕರೆಯಲ್ಪಡುವ ಗುಳಿ ಕೆನ್ನೆ ಬೆಡಗಿ ರಚಿತಾ ರಾಮ್ ಅವರಿಗೆ ಇಂದು ಜನ್ಮದಿನದ ಸಂಭ್ರಮ.

ಕನ್ನಡದ ಎಲ್ಲಾ ಪ್ರಮುಖ ನಟರಾದ  ದರ್ಶನ್​, ಕಿಚ್ಚ ಸುದೀಪ್,  ಪುನೀತ್​ ರಾಜ್​ಕುಮಾರ್​ ಜೊತೆ ನಟಿಸಿರುವ ರಚಿತಾ ರಾಮ್ 2013 ರಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದು ಹಲವಾರು ಯಶಸ್ವಿ ನೀಡಿ ಸ್ಯಾಂಡಲ್​ವುಡ್​ನಲ್ಲಿ ಭಾರೀ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ.

ರಚಿತಾ ರಾಮ್ ಅವರು 2013 ರಲ್ಲಿ ತೆರೆಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬುಲ್‌ಬುಲ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಪ್ರವೇಶಿಸಿದರು.

Vijayaprabha Mobile App free

ರಚಿತಾ ರಾಮ್ ಅವರು ಬುಲ್ ಬುಲ್, ರನ್ನ, ರಥಾವರ, ಚಕ್ರವ್ಯೂಹ, ಭರ್ಜರಿ, ಅಯೋಗ್ಯ, ಸೀತ ರಾಮ ಕಲ್ಯಾಣ, ಐ ಲವ್ ಯು, ಅಯುಷ್ಮಾನ್ ಭವ ಸಿನಿಮಾಗಳಂತಹ ಸಾಲು ಸಾಲು ಯಶಸ್ವಿ ಚಿತ್ರಗಳನ್ನು ನೀಡಿದ್ದು, ಕಿಚ್ಚ ಸುದೀಪ್ ಅಭಿನಯದ ರನ್ನ ಸಿನಿಮಾದ ಅಭಿನಯಕ್ಕಾಗಿ ಸೈಮಾ ಉತ್ತಮ ನಟಿ ಪ್ರಶಸ್ತಿ ಮತ್ತು ಫಿಲ್ಮಫೇರ್ ಸೌಥ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಸದ್ಯ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟಿ ರಚಿತಾ ರಾಮ್ ಅವರ ಕೈಯಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ರವಿ ಬೋಪಣ್ಣ ಸಿನಿಮಾ ಸೇರಿದಂತೆ ಸಾಲು ಸಾಲು ಸಿನಿಮಾಗಳಿದ್ದು, ಮುಂದಿನ ವರ್ಷದವರೆಗೂ ಅವರ ಕಾಲ್ ಶೇಟ್ ಸಿಗದಷ್ಟು ಬ್ಯುಸಿಯಾಗಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.