ಇಂದು ಅಮಿತಾಬ್ ಬಚ್ಚನ್ ಹುಟ್ಟುಹಬ್ಬ; ಶುಭ ಕೋರಿದ ಸಂಸದೆ ಸುಮಲತಾ, ನಟ ಕಿಚ್ಚ ಸುದೀಪ್

ಬೆಂಗಳೂರು: ಇಂದು ಭಾರತದ ಸೂಪರ್ ಸ್ಟಾರ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಹುಟ್ಟುಹಬ್ಬ ಹಿನ್ನಲೆ, ಅಮಿತಾಬ್ ಬಚ್ಚನ್ ಅವರಿಗೆ ಸಂಸದೆ, ನಟಿ ಸುಮಲತಾ ಅಂಬರೀಷ್, ನಟ ಕಿಚ್ಚ ಸುದೀಪ್ ಹಾಗು ತೆಲುಗಿನ ನಿರ್ದೇಶಕ…

sumalatha vijayaprabha

ಬೆಂಗಳೂರು: ಇಂದು ಭಾರತದ ಸೂಪರ್ ಸ್ಟಾರ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಹುಟ್ಟುಹಬ್ಬ ಹಿನ್ನಲೆ, ಅಮಿತಾಬ್ ಬಚ್ಚನ್ ಅವರಿಗೆ ಸಂಸದೆ, ನಟಿ ಸುಮಲತಾ ಅಂಬರೀಷ್, ನಟ ಕಿಚ್ಚ ಸುದೀಪ್ ಹಾಗು ತೆಲುಗಿನ ನಿರ್ದೇಶಕ ಪೂರಿ ಜಗನ್ನಾಥ್ ಸೇರಿದಂತೆ ಭಾರತೀಯ ಚಿತ್ರರಂಗದ ಅನೇಕ ಗಣ್ಯರು ಶುಭ ಕೋರಿದ್ದಾರೆ.

ಕಂದಹಾರ್ ಚಿತ್ರದಲ್ಲಿ ಅವರೊಂದಿಗೆ ನಟಿಸಿದ್ದು ನನ್ನ ಸೌಭಾಗ್ಯ: ಸುಮಲತಾ ಅಂಬರೀಷ್

ಸಂಸದೆ, ನಟಿ ಸುಮಲತಾ ಅಂಬರೀಷ್ ಅವರು ಟ್ವೀಟ್ ಮಾಡಿದ್ದೂ, ಭಾರತ ಕಂಡ ಅತ್ಯುತ್ತಮ ನಟರಲ್ಲಿ ಒಬ್ಬರಾದ ಶ್ರೀ ಅಮಿತಾಬ್ ಬಚ್ಚನ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅಂಬರೀಶ್ ಹಾಗೂ ನಮ್ಮ ಕುಟುಂಬದ ಮೇಲಿರುವ ಅವರ ಸ್ನೇಹ, ಪ್ರೀತಿ ವಿಶೇಷವಾದುದು. ಕಂದಹಾರ್ ಚಿತ್ರದಲ್ಲಿ ಅವರೊಂದಿಗೆ ನಟಿಸಿದ್ದು ನನ್ನ ಸೌಭಾಗ್ಯವೇ ಸರಿ. ಅವರಿಗೆ ಇನ್ನಷ್ಟು ಆರೋಗ್ಯ, ಆಯಸ್ಸನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Vijayaprabha Mobile App free

ನಿಮ್ಮ ಸೆಳವು, ವ್ಯಕ್ತಿತ್ವ ಮತ್ತು ಮೋಡಿ ಯಾವಾಗಲೂ ಸ್ಫೂರ್ತಿ ನೀಡುತ್ತದೆ: ಕಿಚ್ಚ ಸುದೀಪ್

ನಟ ಕಿಚ್ಚ ಸುದೀಪ ಅವರು ಟ್ವೀಟ್ ಮಾಡಿ “ನಿಮ್ಮ ಸೆಳವು, ವ್ಯಕ್ತಿತ್ವ ಮತ್ತು ಮೋಡಿ ಯಾವಾಗಲೂ ಸ್ಫೂರ್ತಿ ನೀಡುತ್ತದೆ. ನಿಮಗೆ ಇನ್ನೂ ಹಲವು ವರ್ಷಗಳ ಉತ್ತಮ ಆರೋಗ್ಯ ಕರುಣಿಸಲಿ. ನಿಮ್ಮನ್ನು ಹತ್ತಿರದಿಂದ ನೋಡುವ ಮತ್ತು ನಿಮ್ಮೊಂದಿಗೆ ಪರದೆಯನ್ನು ಹಂಚಿಕೊಳ್ಳುವ ಅವಕಾಶಗಳನ್ನು ಪಡೆದಿರುವುದು ನಮ್ಮ ಅದೃಷ್ಟ. ಹ್ಯಾಪಿ ರಿಟರ್ನ್ಸ್ ಸರ್ ಎಂದು ಅಮಿತಾಬ್ ಬಚ್ಚನ್ ಅವರಿಗೆ ಶುಭ ಕೋರಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.