5 ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ತೆರೆಕಂಡ ಕನ್ನಡದ ಬಹುನಿರೀಕ್ಷೆಯ ಕಬ್ಜ (Kabza) ಸಿನಿಮಾ ವಿಶ್ವದಾದ್ಯಂತ ಬಹಳ ದೊಡ್ಡಮಟ್ಟದಲ್ಲಿ ಬಿಡುಗಡೆಯಾಗಿದ್ದು, ಮೊದಲ ದಿನ ಚಿತ್ರಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೇ 2ನೇ ದಿನ ಪ್ರೇಕ್ಷಕರು ದೊಡ್ಡಮಟ್ಟದಲ್ಲಿ ಸಿನಿಮಾ ನೋಡಲು ಮುಗಿಬಿದ್ದಿದ್ದಾರೆ.
ಆರ್. ಚಂದ್ರು ನಿರ್ದೇಶನದ ಕಬ್ಜ ಚಿತ್ರಕ್ಕೆ ಸಿನಿ ಪ್ರೇಕ್ಷಕರಿಂದಲೂ ಭಾರೀ ಬೆಂಬಲ-ಪ್ರಶಂಸೆ ವ್ಯಕ್ತವಾಗುತ್ತಿದೆ. ಉಪೇಂದ್ರ (Upendra) ಅವರ ವೃತ್ತಿ ಜೀವನದ ಬಹುದೊಡ್ಡ ಸಿನಿಮಾವಾಗಿ ಕಬ್ಜ ಗಮನಸೆಳೆಯುತ್ತಿದ್ದು, ಕಿಚ್ಚ ಸುದೀಪ್ (Kiccha Sudeep), ಶಿವರಾಜ್ ಕುಮಾರ್ (Shivraj Kumar) ಅಭಿಮಾನಿಗಳು ಕೂಡ ಸಿನಿಮಾ ನೋಡಿ ಫಿದಾ ಆಗಿದ್ದಾರೆ.
ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: SMS ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?
4000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಕಬ್ಜ (Kabza) ಸಿನಿಮಾ:
ಹೌದು, ನಿನ್ನೆ ಪುನೀತ್ ರಾಜ್‌ಕುಮಾರ್ (Puneeth Rajkumar) ಹುಟ್ಟುಹಬ್ಬದ ಸಂಭ್ರಮದಲ್ಲಿ ಸುಮಾರು 4000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಕಬ್ಜ ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆದರೆ, ಕರ್ನಾಟಕದಲ್ಲೇ ಸುಮಾರು 400 ಕ್ಕೂ ಹೆಚ್ಚು ಅಧಿಕ ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದ್ದು, ಮೊದಲ ದಿನವೇ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿತ್ತು.
ಇದೀಗ ಕಲೆಕ್ಷನ್ ಲೆಕ್ಕಾಚಾರದಲ್ಲು ಕಬ್ಜ (Kabza) ಸೌಂಡ್ ಮಾಡ್ತಿದೆ. ಮೊದಲ ದಿನ ವಿಶ್ವದಾದ್ಯಂತ ಕಬ್ಜ ಸಿನಿಮಾ 54 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದು, 2ನೇ ದಿನವೂ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದ್ದು, ನಿರ್ದೇಶಕ ಆರ್. ಚಂದ್ರು (R. Chandru) ಅವರ 4 ವರ್ಷದ ಪರಿಶ್ರಮಕ್ಕೆ ಫಲ ಸಿಕ್ಕಿದೆ. ಕ್ರೇಜ್‌ಗೆ ತಕ್ಕಂತೆ ಸಿನಿಮಾ ಸೆನ್ಸೇಷನ್ ಕ್ರಿಯೇಟ್ ಮಾಡಿದೆ
ಇದನ್ನು ಓದಿ: ಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?
ಕೇವಲ ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ‘ಕಬ್ಜ’:
ಹೌದು, ಮೊದಲ ದಿನ ವಿಶ್ವದಾದ್ಯಂತ ಕಬ್ಜ ಸಿನಿಮಾ 54 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದು, 2ನೇ ದಿನವೂ 45 ಕೋಟಿಗೂ ಅಧಿಕ ಗಳಿಕೆ ಕಂಡಿದ್ದು, ಕೇವಲ ಎರಡೇ ದಿನದಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದ್ದು, ಈ ವಿಚಾರವನ್ನು ಸ್ವತ: ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ.
ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!
ಹೌದು, ‘ಕಬ್ಜ’ ಸಿನಿಮಾ ಘೋಷಣೆಯಾಗಿದ್ದ ದಿನದಿಂದಲೂ ನಿರ್ದೇಶಕ ಆರ್. ಚಂದ್ರು ಭರ್ಜರಿ ಪ್ರಚಾರ ಮಾಡುತ್ತಾ ಬಂದಿದ್ದರು. ಸುದೀಪ್, ಶಿವಣ್ಣನ ಎಂಟ್ರಿಯಿಂದ ಸಿನಿಮಾ ‘ಕಬ್ಜ’ ಸಿನಿಮಾ ಮತ್ತಷ್ಟು ಕ್ರೇಜ್ ಹುಟ್ಟು ಹಾಕಿತ್ತು. ಇದೀಗ ಬಾಕ್ಸಾಫೀಸ್‌ನಲ್ಲಿ ‘ಕಬ್ಜ’ ಸಿನಿಮಾ ಹಳೇ ದಾಖಲೆಗಳ ಮೇಲೆ ಕಣ್ಣಿಟ್ಟಿದ್ದು, ಬೇಟೆ ಶುರು ಮಾಡಿದೆ
1960-70 ರ ಕಾಲಘಟ್ಟದ ಕತೆ ಹೇಳುವ ‘ಕಬ್ಜ’ ಸಿನಿಮಾದಲ್ಲಿ ಉಪೇಂದ್ರ ವಿಭಿನ್ನವಾಗಿ ಕಾಣಿಸಿಕೊಂಡಿದ್ದು, ನೋಡುಗರಿಗೆ ಥ್ರಿಲ್ ನೀಡುತ್ತಿದೆ. ಕಿಚ್ಚ ಸುದೀಪ್ (Kiccha Sudeep) ಪೊಲೀಸ್ ಆಫೀಸರ್ ಪಾತ್ರದಲ್ಲಿ ಮಿಂಚಿದ್ದು, ಶಿವಣ್ಣನ ಪಾತ್ರ ನೋಡುಗರ ಪಾತ್ರವಾಗಿದ್ದು, ನಟಿ ಶ್ರಿಯಾ ಸರಣ್ ಬ್ಯೂಟಿ ಹಾಗೂ ನಟನಗೆ ಪ್ರೇಕ್ಷಕ ಪ್ರಭು ಫಿದಾ ಆಗುತ್ತಿದ್ದಾನೆ.
ಇದನ್ನು ಓದಿ: ಆಧಾರ್ ಕಾರ್ಡ್‌ನಲ್ಲಿ ಏನನ್ನಾದರೂ ನವೀಕರಿಸಬೇಕೇ, ಈ ಸಂಖ್ಯೆಗೆ ಫೋನ್ ಕರೆ ಮಾಡಿ