ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ (87) ವಿಧಿವಶರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು. ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಕನ್ನಡದಲ್ಲಿ ಅಭಿನಯ ಸರಸ್ವತಿ ತಮಿಳಿನಲ್ಲಿ “ಕನ್ನಡತು ಪೈಂಗಿಲಿ” ಎಂದು ಅವರನ್ನು ಕರೆಯಲಾಗುತ್ತಿತ್ತು.
ಒಕ್ಕಲಿಗ ಸಂಪ್ರದಾಯದಂತೆ ಬಿ.ಸರೋಜಾದೇವಿ ಅಂತ್ಯಕ್ರಿಯೆ
ಐದು ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಸರೋಜಾದೇವಿಗೆ ಪದ್ಮಶ್ರೀ (1969), ಪದ್ಮಭೂಷಣ (1992), ರಾಜ್ಯೋತ್ಸವ, ಎಂ.ಜಿ.ಆರ್., ಎನ್‌ಟಿಆರ್. ಪುರಸ್ಕಾರಗಳು ಲಭಿಸಿದ್ದವು. ಅಂತ್ಯಕ್ರಿಯೆ ಕೋಡಿಗೆಹಳ್ಳಿಯಲ್ಲಿ ಪತಿ ಹರ್ಷ ಸಮಾಧಿ ಬಳಿ ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದೆ




