ಸಂಜು ವೆಡ್ಸ್ ಗೀತಾ-2 ಚಿತ್ರದ ವೀಡಿಯೋ ಹಾಡು ರಿಲೀಸ್

ಬೆಂಗಳೂರು: ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ‘ಮಳೆಯಂತೆ ಬಾ’ ಎಂಬ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್…

ಬೆಂಗಳೂರು: ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ‘ಮಳೆಯಂತೆ ಬಾ’ ಎಂಬ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

ಸಂಗೀತಾ ರವೀಂದ್ರನಾಥ್ ಈ ಹಾಡಿಗೆ ಧ್ವನಿಯಾಗಿದ್ದು, ವಿ. ಶ್ರೀಧರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಕವಿರಾಜ್ ಅವರ ಸಾಹಿತ್ಯವಿದೆ.

ಈ ಚಿತ್ರವನ್ನು ನಾಗಶೇಖರ್ ಮೂವೀಸ್ ಪ್ರೊಡಕ್ಷನ್ಸ್ ಹಾಗೂ ಮಹಾನದಿ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಚಲವಾದಿ ಕುಮಾರ್ ನಿರ್ಮಾಣ ಮಾಡಿದ್ದು, ಇಮ್ರಾನ್ ಸರ್ದಾರಿಯಾ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಅಂಥೋನಿ ಸಂಕಲನ, ಸತ್ಯ ಹೆಗಡೆ ಛಾಯಾಗ್ರಹಣ,ಇಮ್ರಾನ್ ಸರ್ದಾರಿಯಾ ಅವರ ನೃತ್ಯ ಸಂಯೋಜನೆ ಇದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.