ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಸಿನಿಮಾದಲ್ಲಿ ‘ಡರ್ಟಿ ಪಿಕ್ಚರ್’ ಖ್ಯಾತಿಯ ವಿದ್ಯಾ ಬಾಲನ್..?

ಹೈದರಾಬಾದ್: ಬಾಲಿವುಡ್ ಡರ್ಟಿ ಪಿಕ್ಚರ್ ಖ್ಯಾತಿಯ ನಟಿ ವಿದ್ಯಾ ಬಾಲನ್ ಅವರು ಮಹೇಶ್ ಬಾಬು ಅವರ ‘ಸರ್ಕಾರು ವಾರಿ ಪಾಟಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಪ್ರಸ್ತುತ ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ‘ಸರಿಲೆರು ನಿಕೆವ್ವರು’…

ಹೈದರಾಬಾದ್: ಬಾಲಿವುಡ್ ಡರ್ಟಿ ಪಿಕ್ಚರ್ ಖ್ಯಾತಿಯ ನಟಿ ವಿದ್ಯಾ ಬಾಲನ್ ಅವರು ಮಹೇಶ್ ಬಾಬು ಅವರ ‘ಸರ್ಕಾರು ವಾರಿ ಪಾಟಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಪ್ರಸ್ತುತ ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ.

‘ಸರಿಲೆರು ನಿಕೆವ್ವರು’ ಸೂಪರ್ ಹಿಟ್ ಸಿನಿಮಾದ ನಂತರ ಸೂಪರ್ ಸ್ಟಾರ್, ಪ್ರಿನ್ಸ್ ಮಹೇಶ್ ಬಾಬು ಅವರು ‘ಸರ್ಕಾರು ವಾರಿ ಪಾಟಾ’ ಸಿನಿಮಾ ಮಾಡುತ್ತಿದ್ದು, ಈ ಸಿನಿಮಾವನ್ನು ‘ಗೀತಾ ಗೋವಿಂದಂ’ ಸಿನಿಮಾ ಖ್ಯಾತಿಯ ನಿರ್ದೇಶಕ ಪರಶುರಾಮ್ ಅವರು ನಿರ್ದೇಶಿಸುತ್ತಿದ್ದಾರೆ.

‘ಗೀತಾ ಗೋವಿಂದಂ’ ಸಿನಿಮಾದ ಯಶಸ್ಸಿನ ನಂತರ ನಿರ್ದೇಶಕ ಪರಶುರಾಮ್ ಅವರ ಮುಂದಿನ ಚಿತ್ರ ಮತ್ತು ಸೂಪರ್ ಸ್ಟಾರ್, ಪ್ರಿನ್ಸ್ ಮಹೇಶ್ ಬಾಬು ಅವರು ‘ಸರಿಲೆರು ನಿಕೆವ್ವರು’ ಯಶಸ್ಸಿನ ನಂತರ ಇಬ್ಬರ ಕಾಂಬಿನೇಷನ್ ನಲ್ಲಿ ಬರುತ್ತಿರುವ ‘ಸರ್ಕಾರು ವಾರಿ ಪಾಟಾ’ ಸಿನಿಮಾ ಕುರಿತು ಭಾರಿ ನಿರೀಕ್ಷೆಗಳಿದ್ದು, ಈ ಯಶಸ್ಸನ್ನು ಮುಂದುವರಿಸುತ್ತಾರೆ ಎಂದು ಅವರ ಅಭಿಮಾನಿಗಳು ಭರವಸೆ ವ್ಯಕ್ತಪಡಿಸಿದ್ದು. ಈ ಸಿನಿಮಾಕ್ಕಾಗೆ ಎದುರು ನೋಡುತ್ತಿದ್ದಾರೆ.

Vijayaprabha Mobile App free

ನಟ ಶೇಖರ ಕೃಷ್ಣ ಅವರ ಜನ್ಮದಿನದಂದು ಚಿತ್ರತಂಡ ಬಿಡುಗಡೆ ಮಾಡಿದ್ದ, ‘ಸರ್ಕಾರು ವಾರಿ ಪಾಟಾ’ ಸಿನಿಮಾದ ಫಸ್ಟ್ ಲುಕ್ ಮತ್ತು ಶೀರ್ಷಿಕೆ ಪೋಸ್ಟರ್ ಗೆ ಪೋಸ್ಟರ್‌ಗೆ ಪ್ರೇಕ್ಷಕರಿಂದ ಅನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರಸ್ತುತ ಚಿತ್ರತಂಡವು ಪಾತ್ರವರ್ಗವನ್ನು ಆಯ್ಕೆ ಮಾಡುವಲ್ಲಿ ನಿರತವಾಗಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ ಬಾಲಿವುಡ್ ನಟಿ ವಿದ್ಯಾ ಬಾಲನ್ ‘ಸರ್ಕಾರು ವಾರಿ ಪಾಟಾ’ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಸಿನಿಮಾ ಮೂಲಗಳ ಪ್ರಕಾರ, ಬಾಲಿವುಡ್ ನಟಿ “ಡರ್ಟಿ ಪಿಕ್ಚರ್” ಖ್ಯಾತಿಯ ವಿದ್ಯಾ ಬಾಲನ್ ಅವರು ಮಹೇಶ್ ಬಾಬು ಅವರ ಅಕ್ಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬರಿತ್ತಿದೆ. ನಿರ್ದೇಶಕ ಪರಶುರಾಮ್ ಅವರು ಈಗಾಗಲೇ ವಿದ್ಯಾ ಬಾಲನ್‌ಗೆ ಕಥೆಯನ್ನು ಹೇಳಿದ್ದು, ಅವರು ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಮಾಹಿತಿ ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ.

ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ಈಗಾಗಲೇ ನಟ ನಂದಮೂರಿ ಬಾಲಕೃಷ್ಣ ಅವರ ‘ಎನ್‌ಟಿಆರ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ಬಾಲಕೃಷ್ಣ ಎದುರು ಬಸವತಾರಕಂ ಪಾತ್ರದಲ್ಲಿ ಅವರು ಅಭಿನಯಿಸಿದ್ದರು. ಈಗ ವಿದ್ಯಾ ಬಾಲನ್ ಮಹೇಶ್ ಅವರ ಅಕ್ಕನ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಟಾಲಿವುಡ್ ಸಿನಿಮಾ ರಂಗದಲ್ಲಿ ಹರಿದಾಡುತ್ತಿದೆ.

ಸರ್ಕಾರು ವಾರಿ ಪಾಟಾ ಸಿನಿಮಾಲ್ಲಿ ಮಹೇಶ್ ಬಾಬು ಎದುರು ಮಹಾನಟಿ ಖ್ಯಾತಿಯ ನಟಿ ಕೀರ್ತಿ ಸುರೇಶ್ ನಟಿಸಲಿದ್ದು, ಎಸ್.ಥಮನ್ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಇದನ್ನು ಓದಿ: ಹೆಸರಾಂತ ನಟಿ, ಸಂಸದೆ ಮಿಮಿ ಚಕ್ರವರ್ತಿ ಮೇಲೆ ನಡುರಸ್ತೆಯಲ್ಲಿಯೇ ಲೈಂಗಿಕ ಕಿರುಕುಳ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.