ಮುಂಬೈನಲ್ಲಿ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಚಿತ್ರದ ಟ್ರೇಲರ್ ಲಾಂಚ್ ವೇಳೆ, ಈ ಸಿನಿಮಾ 1000 ಕೋಟಿ ಕಲೆಕ್ಷನ್ ಮಾಡುತ್ತಾ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಕಿಚ್ಚ ಸುದೀಪ್ ನಗುತ್ತಲೇ ಉತ್ತರಿಸಿದ್ದಾರೆ.
ಹೌದು, ಕಿಚ್ಚ ಸುದೀಪ್ ನಗುತ್ತ ‘1 ಲಕ್ಷ ರೂಪಾಯಿ ಕಾರನ್ನು ಚಲಾಯಿಸುವ ವ್ಯಕ್ತಿ ಸಂತೋಷವಾಗಿರುವುದನ್ನು ನೋಡಿದ್ದೇನೆ. ಅದೇ ರೀತಿ ಸಾಮಾನ್ಯ ಕಾರು ಹೊಂದಿರುವವರು ಸಂತೋಷವಾಗಿರುವುದನ್ನು ನೋಡಿದ್ದೇನೆ. 1000 ಕೋಟಿ ಒಬ್ಬ ವ್ಯಕ್ತಿಯನ್ನು ಸಂತೋಷಪಡಿಸುತ್ತದೆ ಎಂದರೆ ಬಹುಶಃ ನಾನು 2000 ಕೋಟಿ ರೂ. ಗಳಿಸಲು ಬಯಸುತ್ತೇನೆ’ ಎಂದು ಉತ್ತರಿಸಿದ್ದಾರೆ.
ಇನ್ನು, ಬಹು ನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಫ್ಯಾಂಟಸಿ ಸಾಹಸ ಚಿತ್ರವಾಗಿದ್ದು, ಈ ಚಿತ್ರವನ್ನು ಅನುಪ್ ಭಂಡಾರಿ ನಿರ್ದೇಶಿಸಿದ್ದಾರೆ. ಈ ಸಿನಿಮಾದಲ್ಲಿ ನಟ ಸುದೀಪ್ ನಟಿ ನೀತಾ ಅಶೋಕ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದೂ, ಜುಲೈ 28 ಕ್ಕೆ ತೆರೆ ಮೇಲೆ ಬರಲು ಸಿದ್ದವಾಗುತ್ತಿದೆ.