ತಮಿಳಿನ ಖ್ಯಾತ ನಟನಿಂದ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಟ್ರೈಲರ್ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ಟ್ರೈಲರ್ ಅನ್ನು ತಮಿಳು ನಟ ಧನುಷ್ ಬಿಡುಗಡೆ ಮಾಡಲಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ನಾಳೆ (ಜೂ.23) ಸಂಜೆ 4 ಗಂಟೆಗೆ…

ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ಟ್ರೈಲರ್ ಅನ್ನು ತಮಿಳು ನಟ ಧನುಷ್ ಬಿಡುಗಡೆ ಮಾಡಲಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ನಾಳೆ (ಜೂ.23) ಸಂಜೆ 4 ಗಂಟೆಗೆ ಟ್ರೈಲರ್ ಅನಾವರಣ ಮಾಡಿ, ಚಿತ್ರಕ್ಕೆ ಶುಭ ಹಾರೈಸಲಿದ್ದಾರೆ ಎಂದು ಈ ಬಗ್ಗೆ ನಟ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

ವಿಕ್ರಾಂತ್ ರೋಣ ಚಿತ್ರವು ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾವಾಗಿದ್ದು, ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಇನ್ನು, ಈ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದ್ದು, 3ಡಿ ತಂತ್ರಜ್ಞಾನದಲ್ಲಿ 7 ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.