ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ದೀಪಿಕಾ ಪಡುಕೋಣೆ ಅವರನ್ನು ಹೈದರಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದಾಖಲಾದ ನಂತರ ಏನಾಯಿತು ಎಂದು ಅಭಿಮಾನಿಗಳು ಕಂಗಾಲಾಗಿದ್ದಾರೆ.
ಮೂಲಗಳ ಪ್ರಕಾರ, ದೀಪಿಕಾ ತನ್ನ ಮುಂಬರುವ ಚಿತ್ರ ‘ಪ್ರಾಜೆಕ್ಟ್ ಕೆ ಸೆಟ್’ನಲ್ಲಿ ಅಸ್ವಸ್ಥರಾದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರಿಂದ ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ಅವರು ಚೇತರಿಸಿಕೊಂಡಿದ್ದು ಸೆಟ್‌ಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.
ನಟಿ ದೀಪಿಕಾ ಪಡುಕೋಣೆ ಅವರು ‘ಟಾಕಿಕಾರ್ಡಿಯಾ’ ಎಂಬ ಸಮಸ್ಯೆಯನ್ನು ಎದುರಿಸುತ್ತಿದ್ದು, ಇದು ಹಠಾತ್ ಹೃದಯ ಬಡಿತ. ಒತ್ತಡ, ಅತಿಯಾದ ವ್ಯಾಯಾಮ, ಕೆಫೀನ್ ಸೇವನೆ ಮತ್ತು ಹಾರ್ಮೋನ್ ಸಮಸ್ಯೆಗಳಿಂದ ಉಂಟಾಗಬಹುದು ಎನ್ನುತ್ತಾರೆ ವೈದ್ಯರು.
ದೀಪಿಕಾ ಪಡುಕೋಣೆ ಪ್ರಸ್ತುತ ಪ್ರಭಾಸ್ ನಾಯಕನಾಗಿ ನಟಿಸುತ್ತಿರುವ ‘ಪ್ರಾಜೆಕ್ಟ್ ಕೆ’ ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್‌ನಲ್ಲಿದ್ದಾರೆ. ಪ್ರಾಜೆಕ್ಟ್ ಕೆ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಮತ್ತು ದಿಶಾ ಪಟಾನಿ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.