ration card: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

Vijayaprabha

ration card: ಪಡಿತರ ಚೀಟಿಯ ಅರ್ಜಿಗಳನ್ನು ಮಾ.31ರೊಳಗೆ ಪರಿಶೀಲನೆ ನಡೆಸಿ, ಏಪ್ರಿಲ್ 1 ರಿಂದ ವಿತರಿಸುತ್ತೇವೆಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

ಇದನ್ನು ಓದಿ: ಒಂದಕ್ಕಿಂತ ಹೆಚ್ಚು EPF ಖಾತೆಗಳನ್ನು ಹೊಂದಿರುವಿರಾ? ವಿಲೀನಗೊಳಿಸುವ ಸರಳ ಪ್ರಕ್ರಿಯೆ ಇಲ್ಲಿದೆ!

ಹೌದು, ವಿಧಾನಸಭೆಯ ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ & ವಿಪಕ್ಷ ನಾಯಕ ಆರ್.ಅಶೋಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್ ಉಳಿಸಿಕೊಂಡಿತ್ತು. ಈವರೆಗೆ ನಾವು 57 ಸಾವಿರ ಕಾರ್ಡ್ ನೀಡಿದ್ದೇವೆ. ಮುಂದೆ ನೀಡುವ ಬಗ್ಗೆ ಆದೇಶಿಸಲಾಗಿದ್ದು, ಶೀಘ್ರ BPL & APL ಕಾರ್ಡ್​ಗಳನ್ನು ಕೊಡುತ್ತೇವೆಂದು ಹೇಳಿದ್ದಾರೆ.

ration card: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ration card: ಮಾರ್ಚ್ 30ರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ

ಇನ್ನು, ಹೊಸ ರೇಷನ್ ಕಾರ್ಡ್ ಗಾಗಿ (ration card) ರಾಜ್ಯಾದ್ಯಂತ ಭಾರೀ ಬೇಡಿಕೆಯಿದ್ದು ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೆ ಕೇಳಲಾಯಿತು. ಇದಕ್ಕೆ ಸಚಿವ ಮುನಿಯಪ್ಪ ಅವರು ಉತ್ತರಿಸಿ, ಮಾರ್ಚ್ 30ರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನು ಓದಿ: ರೈತರಿಗೆ ಕೇಂದ್ರ ಸರ್ಕಾರದ ಯೋಜನೆಗಳು.. ಯಾವ ಯೋಜನೆಯಿಂದ ಏನು ಲಾಭ?

ಈಗಾಗಲೇ ಸಲ್ಲಿಕೆ ಆಗಿದ್ದು, ಬಾಕಿ ಇರುವ 2500 ಅರ್ಜಿ ವಿಲೇವಾರಿಗೆ ಸದಸ್ಯರಿಂದ ಒತ್ತಾಯ ಕೇಳಿಬಂದಿದ್ದು, ಇದಕ್ಕೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ

 

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version