ಹೃದಯದ ಆರೋಗ್ಯಕ್ಕಾಗಿ ಈ ಮುನ್ನೆಚ್ಚರಿಕೆಗಳನ್ನು ಪಾಲಿಸಿ..!

ಹೃದಯದ ಆರೋಗ್ಯಕ್ಕಾಗಿ ಮುನ್ನೆಚ್ಚರಿಕಾ ಕ್ರಮಗಳು: ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿ ಪುರುಷರಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗಳು ಕಂಡು ಬರ್ತಿತ್ತು. ಪುರುಷರಲ್ಲಿ ಉತ್ಪತ್ತಿಯಾಗುವ ಹಾರ್ಮೋನುಗಳು ಮತ್ತು ಕೆಲಸದ ಒತ್ತಡ ಇತ್ಯಾದಿಗಳಿಂದಾಗಿ ಹೃದಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು…

Heart-Attack-vijayaprabha-news

ಹೃದಯದ ಆರೋಗ್ಯಕ್ಕಾಗಿ ಮುನ್ನೆಚ್ಚರಿಕಾ ಕ್ರಮಗಳು:

ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿ ಪುರುಷರಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗಳು ಕಂಡು ಬರ್ತಿತ್ತು. ಪುರುಷರಲ್ಲಿ ಉತ್ಪತ್ತಿಯಾಗುವ ಹಾರ್ಮೋನುಗಳು ಮತ್ತು ಕೆಲಸದ ಒತ್ತಡ ಇತ್ಯಾದಿಗಳಿಂದಾಗಿ ಹೃದಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ಹೇಳಲಾಗುತ್ತದೆ. ಹೃದಯ ಸಂಬಂಧಿ ಕಾಯಿಲೆಗಳು ಬರದಂತೆ ನೋಡಿಕೊಳ್ಳಲು ಪುರುಷರು ಈ ಮುನ್ನೆಚ್ಚರಿಕೆಗಳನ್ನು ಪಾಲಿಸಲೇಬೇಕು. ಅವು ಯಾವುವೆಂದರೆ….

ಅಧಿಕ ಪ್ರೋಟೀನ್ ಸಹ ಒಳ್ಳೆಯದಲ್ಲ:

Vijayaprabha Mobile App free

ಡಯಟ್ ಹೆಸರಿನಲ್ಲಿ ಪುರುಷರು ಹೆಚ್ಚು ಪ್ರೊಟೀನ್ ಆಹಾರ ತೆಗೆದುಕೊಳ್ಳುತ್ತಾರೆ. ಸಾಮಾನ್ಯ ಆಹಾರಕ್ಕಿಂತ ತಮ್ಮ ಆಹಾರದಲ್ಲಿ ಪ್ರೊಟೀನ್ ಹೆಚ್ಚು ಇರುವಂತೆ ನೋಡಿಕೊಳ್ಳುತ್ತಾರೆ. ಹೆಚ್ಚಿನ ಪ್ರೋಟೀನ್ ಹೃದಯ ಸಂಬಂಧಿತ ಕಾಯಿಲೆಗಳ ಆರಂಭಿಕ ಆಕ್ರಮಣಕ್ಕೆ ಕಾರಣವಾಗಬಹುದು. ಹಾಗಾಗಿ ಸಮತೋಲಿತ ಆಹಾರವನ್ನು ಸೇವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು.

ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುವುದು:

ನಿಯಮಿತವಾಗಿ ಬಿಪಿ ತಪಾಸಣೆ ಮಾಡಿಸಿಕೊಳ್ಳಬೇಕು. ಒತ್ತಡಕ್ಕೆ ಒಳಗಾಗಬೇಡಿ. ಅಧಿಕ ಬಿಪಿ ಹೃದಯಾಘಾತಕ್ಕೆ ಕಾರಣವಾಗಬಹುದು.

ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು:

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಬೇಕು. ಅಧಿಕ ರಕ್ತದ ಸಕ್ಕರೆಯ ಮಟ್ಟವು ಮಧುಮೇಹಕ್ಕೆ ಕಾರಣವಾಗುವುದಲ್ಲದೆ, ಹೃದಯದ ಆರೋಗ್ಯವನ್ನು ಹಾನಿಗೊಳಿಸುತ್ತದೆ. ರಕ್ತ ಪೂರೈಕೆಯನ್ನು ನಿರ್ಬಂಧಿಸುತ್ತದೆ. ಇದಕ್ಕಾಗಿ ಸರಿಯಾದ ರೀತಿಯಲ್ಲಿ ಸರಿಯಾದ ಆಹಾರವನ್ನು ಸೇವಿಸುವುದು ಉತ್ತಮ.

ಕೆಟ್ಟ ಚಟಗಳಿಂದ ದೂರವಿರಿ:

ಮದ್ಯಪಾನ ಮತ್ತು ಧೂಮಪಾನದಂತಹ ಕೆಟ್ಟ ಅಭ್ಯಾಸಗಳನ್ನು ಕಟ್ಟುನಿಟ್ಟಾಗಿ ತ್ಯಜಿಸಬೇಕು. ಇದರಿಂದ ದೇಹದ ಹಲವು ಅಂಗಗಳ ಆರೋಗ್ಯ ಹಾಳಾಗುತ್ತದೆ. ಧೂಮಪಾನವು ಶ್ವಾಸಕೋಶವನ್ನು ಹಾನಿಗೊಳಿಸುತ್ತದೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.