ಮುಟ್ಟು ಮಹಿಳೆಯಲ್ಲಾಗುವ ನೈಸರ್ಗಿಕ ಕ್ರಿಯೆ. ಪ್ರತಿ ತಿಂಗಳು ನೀವು ಮುಟ್ಟಾಗ್ತಿದ್ದೀರಿ ಅಂದ್ರೆ, ನೀವು ಆರೋಗ್ಯವಾಗಿದ್ದೀರಿ ಎಂದೇ ಅರ್ಥ. ಆದರೆ ಈಚೆಗೆ ಚಿಕ್ಕ ವಯಸ್ಸಿನಲ್ಲೇ ಹೆಣ್ಣುಮಕ್ಕಳು ಋತುಮತಿರಾಗುತ್ತಿದ್ದು, ಇದು ಅಪಾಯಕಾರಿ ಬೆಳವಣಿಗೆಯಾಗಿದೆ. ಇದು ಒಳ್ಳೆಯ ಲಕ್ಷಣವಲ್ಲ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!
ಹೌದು, ಈಗ 8-9 ವರ್ಷಕ್ಕೆಲ್ಲ ಮುಟ್ಟಾಗುತ್ತಿದ್ದು, ಚಿಕ್ಕ ವಯಸ್ಸಿನಲ್ಲೇ ಹೆಣ್ಣುಮಕ್ಕಳು ಋತುಮತಿರಾಗುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿಗೆ. ಅವುಗಳೆಂದರೆ, ಇತ್ತೀಚಿನ ಆಹಾರ ಪದ್ಧತಿ, ದೈಹಿಕ ವ್ಯಾಯಾಮದ ಕೊರತೆ, ಆನುವಂಶಿಕ ಕಾರಣ, ದೇಹದ ತೂಕ ಪ್ರಮುಖ ಕಾರಣಗಳಾಗಿವೆ. ಆರೋಗ್ಯಕರ ಆಹಾರ ಸೇವನೆ, ದೈಹಿಕ ವ್ಯಾಯಾಮ ಮಾಡುವುದು ಈ ಸಮಸ್ಯೆಗೆ ಪ್ರಮುಖ ಪರಿಹಾರವಾಗಿದೆ.
ಹಾಗಾಗಿ ಹೆಣ್ಣುಮಕ್ಕಳಿಗೆ ಫಾಸ್ಟ್‌ಫುಡ್, ಜಂಕ್‌ಫುಡ್ ಬಿಟ್ಟು ಉತ್ತಮ ಆಹಾರ, ದೈಹಿಕ ಚಟುವಟಿಕೆಗಳು, ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವಂತೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನು ಓದಿ: ಮಕ್ಕಳ ಆರೋಗ್ಯ ನೀವು ಗಮನಿಸುತ್ತಿದ್ದೀರಾ? ನಿಮ್ಮ ಮಕ್ಕಳು ಖಾಲಿ ಹೊಟ್ಟೆಯಲ್ಲಿ ಏನು ತಿನ್ನುತ್ತಾರೆ ?