ರಾಜ್ಯದಲ್ಲಿ ಇನ್ನೆರೆಡು ದಿನ ಮಳೆ: ಹವಾಮಾನ ಇಲಾಖೆಯ ಮುನ್ಸೂಚನೆ

Heavy rain: ಏಪ್ರಿಲ್ 24ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಹಲವು ಜಿಲ್ಲೆಗಳಲ್ಲಿ ಸೋಮವಾರ ಧಾರಾಕಾರ ಮಳೆಯಾಗಿದೆ.

Vijayaprabha
Heavy rain

Heavy rain: ಏಪ್ರಿಲ್ 24ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಹಲವು ಜಿಲ್ಲೆಗಳಲ್ಲಿ ಸೋಮವಾರ ಧಾರಾಕಾರ ಮಳೆಯಾಗಿದೆ.

ಇದನ್ನು ಓದಿ: BBMP ಗ್ರೂಪ್ D ಸಿವಿಲ್ ಸರ್ವೆಂಟ್ ನೇಮಕಾತಿ 2024; 11307 ಪೋಸ್ಟ್‌ಗಳಿಗೆ ಅರ್ಜಿ ಅಹ್ವಾನ

ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಮಧ್ಯಾಹ್ನ ವ್ಯಾಪಕ ಮಳೆಯಾಗಿದೆ. ಇನ್ನೆರಡು ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಆ ಬಳಿಕ ರಾಜ್ಯದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಜಿಲ್ಲೆಯಲ್ಲಿ ಚದುರಿದಂತೆ ಬಿರುಗಾಳಿ ಸಹಿತ ಮಳೆಯಾಗಲಿದೆ.

ಭಾರೀ ಮಳೆ..ಸಿಡಿಲಿಗೆ ಮೂವರು ಬಲಿ

ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರವೂ ಕೆಲವೆಡೆ ಗುಡುಗು ಸಿಡಿಲು-ಗುಡುಗು ಸಹಿತ ಮಳೆಯಾಗಿದ್ದು, ಬೀದರ್ ಜಿಲ್ಲೆಯ ನಿಟ್ಟೂರು (ಬಿ) ಗ್ರಾಮದಲ್ಲಿ ತಾಯಿಯ ಎದುರೇ ಸಿಡಿಲಿಗೆ ಮಗ ಬಲಿಯಾಗಿದ್ದಾನೆ.

ಇದನ್ನು ಓದಿ: 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು; ಪಿಯುಸಿ, ಡಿಪ್ಲೊಮಾ, ಐಟಿಐ ಮುಗಿಸಿದವರಿಗೆ ಸುವರ್ಣಾವಕಾಶ

ಆಳಂದದ ದೇವಂತಗಿ ಗ್ರಾಮ ಹಾಗೂ ಕೊಪ್ಪಳದ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ಸಿಡಿಲಿನಿಂದಾಗಿ ಬಾಲಕರಿಬ್ಬರು ಸಾವನ್ನಪ್ಪಿದ್ದು, ಚಿಕ್ಕಮಗಳೂರಿನ ಲಿಂಗದಹಳ್ಳಿಯಲ್ಲಿ ಕಾರಿನ ಮೇಲೆ ತೆಂಗಿನಮರ, ವಿದ್ಯುತ್ ಕಂಬ ಬಿದ್ದು ಕಾರಿನ ಚಾಲಕ ಮೃತಪಟ್ಟಿದ್ದಾರೆ. ಕೊಡಗಿನಲ್ಲೂ ಭಾರೀ ಮಳೆಯಾಗಿದೆ.

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version