ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡಿನ ಭಾಗದಲ್ಲಿ ಇಂದಿನಿಂದ ಜೂನ್ 26ರವರೆಗೆ ಮಳೆಯಾಗಲಿದ್ದು, ಹವಾಮಾನ ಇಲಾಖೆ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ಘೋಷಿಸಿದೆ.
ಇನ್ನು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗಲಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿ ಮಾಡಿದೆ.
ಇನ್ನು, ಕಡಲ ತೀರಗಳು ಮತ್ತು ಮಲೆನಾಡಿನ ಜಲಪಾತಗಳಿಗೆ ಪ್ರವಾಸಿಗರಿಗೆ ಭೇಟಿ ನೀಡದಂತೆ ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.