ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೌದು, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಇಂದಿನಿಂದ ಏಪ್ರಿಲ್ 5 ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಸೂಚನೆ ನಿಡೀದೆ.
ನಿಮ್ಮ ಫೋನ್ ಕಳೆದು ಹೋದರೆ, ತಕ್ಷಣ ಹೀಗೆ ಬ್ಲಾಕ್ ಮಾಡಿ.. ಎಲ್ಲವೂ ಸೇಫ್..!
ಇನ್ನು, ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.