ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ; ದಾವಣಗೆರೆ ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Vijayaprabha

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದ್ದು, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವೆಡೆ 2 ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕಳೆದ ಎರಡು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ ಮೈಸೂರು, ಹಾಸನ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿಯಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಇಂದಿನಿಂದ ಕೊಂಚ ಕಡಿಮೆಯಾಗಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ರಾಮನಗರ, ಕೋಲಾರ ಭಾಗದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕಡಿಮೆಯಾಗಲಿದ್ದು, ಅಕ್ಟೋಬರ್ 8 ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಈ ತಿಂಗಳ 2ನೇ ವಾರದಲ್ಲಿ ರಾಜ್ಯಕ್ಕೆ ಹಿಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version