ಪ್ರಧಾನಿ ನರೇಂದ್ರ ಮೋದಿ(Narendra Modi) ಮೂರುದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು ಇಂದು ಬ್ರೂನಿಗೆ ತೆರಳಿದ್ದಾರೆ. ಇಂದು ಮತ್ತು ಸೆಪ್ಟೆಂಬರ್ 4 ರಂದು ಬ್ರೂನಿಗೆ ಭೇಟಿ ನೀಡಲಿದ್ದಾರೆ, ಬ್ರೂನಿಯ ಸುಲ್ತಾನ್ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಇದು ಬ್ರೂನಿಗೆ ಭಾರತದ ಪ್ರಧಾನಿಯ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಪ್ರಧಾನಿ ಭೇಟಿ ವಿಶೇಷವಾಗಿ ಭಾರತೀಯ ವಲಸಿಗ ಸಮುದಾಯದ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುತ್ತದೆ ಎನ್ನಲಾಗಿದೆ. ಭಾರತವು ಬ್ರೂನಿಯಿಂದ ಹೈಡ್ರೋಕಾರ್ಬನ್‌ಗಳನ್ನು ಆಮದು ಮಾಡಿಕೊಳ್ಳುತ್ತಿದೆ.
ಇದಾದ ನಂತರ ಪ್ರಧಾನಿ ಮೋದಿ ಬ್ರೂನಿಯಿಂದ ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ. ಸಿಂಗಾಪುರದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ. ಆಸಿಯಾನ್ ಚೌಕಟ್ಟಿನಡಿಯಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು ಪರಿಶೀಲಿಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಪ್ರಧಾನಿ ಮೋದಿ ಇತ್ತೀಚೆಗೆ ಪೋಲೆಂಡ್ ಮತ್ತು ಉಕ್ರೇನ್‌ಗೆ ಭೇಟಿ ನೀಡಿದ್ದರು.
ವ್ಯಾಪಾರ ಮತ್ತು ಹೂಡಿಕೆ, ಇಂಧನ, ಬಾಹ್ಯಾಕಾಶ ತಂತ್ರಜ್ಞಾನ, ಆರೋಗ್ಯ, ಸಾಮರ್ಥ್ಯ ನಿರ್ಮಾಣ, ಸಂಸ್ಕೃತಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಭಾರತ ಮತ್ತು ಬ್ರೂನಿ ರಾಜತಾಂತ್ರಿಕ ಸಂಬಂಧದಲ್ಲಿ 40 ವರ್ಷಗಳನ್ನು ಪೂರೈಸುತ್ತಿವೆ. ನಾನು ಸಿಂಗಾಪುರದಲ್ಲಿ ಸುಲ್ತಾನ್ ಹಾಜಿ ಹಸನಲ್ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ, ನಾನು ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ, ಪ್ರಧಾನ ಮಂತ್ರಿ ಲಾರೆನ್ಸ್ ವಾಂಗ್, ಹಿರಿಯ ಸಚಿವ ಲೀ ಹ್ಸೆನ್ ಲೂಂಗ್ ಮತ್ತು ಇತರ ಹಿರಿಯ ಸಚಿವರನ್ನು ಭೇಟಿಯಾಗುತ್ತೇನೆ. ನಾವು ಅನೇಕ ಪ್ರಮುಖ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಬಲಪಡಿಸಲು ಎದುರು ನೋಡುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ.