ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ(Uppara nigama yojane)ರ್ಜಿ ಆಹ್ವಾನಿಸಾಲಾಗಿದೆ.
ಉಪ್ಪಾರ ಅಭಿವೃದ್ಧಿ ನಿಗಮದಿಂದ ಪ್ರತಿ ವರ್ಷದಂತೆ ಈ ವರ್ಷವು ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ನೆರವಾಗಲು ವಿವಿಧ ಸಹಾಯಧನ ಆಧಾರಿತ ಯೋಜನೆಯಡಿ ಪ್ರಯೋಜನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಯಾವೆಲ್ಲ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Uppara nigama yojanegalu- ಉಪ್ಪಾರ ಅಭಿವೃದ್ಧಿ ನಿಗಮದ ಯೋಜನೆಗಳು:
1) ಗಂಗಾ ಕಲ್ಯಾಣ ಯೋಜನೆ.2) ಸ್ವಯಂ ಉದ್ಯೋಗ ನೇರ ಸಾಲ ಯೋಜನೆ.3) ಸ್ವಾವಲಂಬಿ ಸಾರಥಿ ಯೋಜನೆ.4) ಅರಿವು ಶೈಕ್ಷಣಿಕ ಸಾಲ
Last date for application- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಅರ್ಹ ಅಭ್ಯರ್ಥಿಗಳು ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು 16 ಸೆಪ್ಟಂಬರ್ 2024ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
Documents for application- ಅಗತ್ಯ ದಾಖಲೆಗಳು:
1) ಅರ್ಜಿದಾರರ ಆಧಾರ್ ಕಾರ್ಡ.2) ಬ್ಯಾಂಕ್ ಪಾಸ್ ಬುಕ್.3) ರೇಶನ್ ಕಾರ್ಡ.4) ಪೋಟೋ.5) ಗುರುತಿನ ಚೀಟಿ.6) ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
Where to submit the application-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
1) ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿರುವ ಬಾಪೂಜಿ ಸೇವಾ ಕೇಂದ್ರ.
2) ಬೆಂಗಳೂರು ಒನ್.
3) ಕರ್ನಾಟಕ ಒನ್.
4) ಗ್ರಾಮ ಒನ್
5) ಅಟಲ್-ಜಿ ಜನಸ್ನೇಹಿ ಕೇಂದ್ರಗಳು
Online application- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು:
ಅರ್ಹ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
Link- ಅರ್ಜಿ ಸಲ್ಲಿಸಲು ಲಿಂಕ್: Apply Now
1) ganga kalyana yojane- ಗಂಗಾ ಕಲ್ಯಾಣ ಯೋಜನೆ:
ಗಂಗಾ ಕಲ್ಯಾಣ ಯೋಜನೆಯಡಿ ತೋಟಗಾರಿಕೆ ಬೆಳೆಗಳನ್ನು ನೀರಾವರಿ ಸೌಲಭ್ಯವನ್ನು ಒದಗಿಸಲು ಬೋರ್ವೆಲ್ ಕೊರೆಸಲು 4.75 ಲಕ್ಷದ ವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರು:
1) ಈ ನಿಗಮದ ವ್ಯಾಪ್ತಿಗೆ ಬರುವ ವರ್ಗದ ನಾಗರಿಕರು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು.
2) ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ Farmer’s FRUIT ID ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.
2) svayam udyoga neera sala yojane- ಸ್ವಯಂ ಉದ್ಯೋಗ ನೇರ ಸಾಲ ಯೋಜನೆ:
ಸ್ವ-ಉದ್ಯೋಗವನ್ನು ಆರಂಭಿಸಲು ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಒಟ್ಟು ಯೋಜನಾ ವೆಚ್ಚಕೆ ಸಹಾಯಧನವನ್ನು ನೀಡಲಾಗುತ್ತದೆ.
3) svavalambi sarati yojane- ಸ್ವಾವಲಂಬಿ ಸಾರಥಿ ಯೋಜನೆ:
ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಭಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ (ಹಳದಿ ಬೊರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ 3.00 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು.
ಇದನ್ನೂ ಓದಿ: self employment subsidy-ಸ್ವ-ಉದ್ಯೋಗ ಆರಂಭಿಸಲು 30,000 ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು. ವಯೋಮಿತಿ 21 ರಿಂದ 45 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು.
4) arivu shaikshanika yojane- ಅರಿವು ಶೈಕ್ಷಣಿಕ ಸಾಲ:
ಈ ಯೋಜನೆಯಡಿ ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯಧನ ನೀಡಲಾಗುತ್ತದೆ.
ಉಪ್ಪಾರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ ಲಿಂಕ್: Click hereಸಹಾಯವಾಣಿ ಸಂಖ್ಯೆ: 0836-2957829