ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್‌ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ.
ಯುಎಇನಲ್ಲಿ ಪುರುಷ ನರ್ಸ್ ಗಳಿಗೆ ಉದ್ಯೋಗ ಪಡೆದವರಿಗೆ ಮಾಸಿಕವಾಗಿ 1,11,000 ರೂ. ಸಂಬಳ ಸಿಗಲಿದೆ. ಆಗಸ್ಟ್ ನಲ್ಲಿ ಆನ್ ಲೈನ್ ಮೂಲಕ ಸಂದರ್ಶನ ನಡೆಯಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment