ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶಿಸಿದೆ.
ಈ ಪ್ರಕರಣದಲ್ಲಿ ದರ್ಶನ್ ಗೆ ಸದ್ಯಕ್ಕೆ ಬೇಲ್ ಸಿಗುವ ಸಾಧ್ಯತೆ ಬಹಳ ಕಡಿಮೆ ಎಂದು ಹೇಳಲಾಗುತ್ತಿದೆ. 90 ದಿನದೊಳಗೆ ಪ್ರಕರಣದ ಬಗ್ಗೆ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಗೆ ಅವಕಾಶವಿದ್ದು, ಅಷ್ಟರೊಳಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment