ಲೈಂಗಿಕ ಕಿರುಕುಳ ಆರೋಪ – ಆ.30ರ ವರೆಗೆ ಯಡಿಯೂರಪ್ಪಗೆ ಬಿಗ್ ರಿಲೀಫ್

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಲಾಗಿದೆ.ಮತ್ತು ಹೈಕೋರ್ಟ್‌ , ಆ.30ರವರೆಗೆ ಬಿಎಸ್‌ವೈ ಗೆ ವಿನಾಯಿತಿ ನೀಡಿದೆ. ಬಿ.ಎಸ್‌. ಯಡಿಯೂರಪ್ಪ, ಪ್ರಕರಣ ಸಂಬಂಧ ತಮ್ಮ…

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಲಾಗಿದೆ.ಮತ್ತು ಹೈಕೋರ್ಟ್‌ , ಆ.30ರವರೆಗೆ ಬಿಎಸ್‌ವೈ ಗೆ ವಿನಾಯಿತಿ ನೀಡಿದೆ.

ಬಿ.ಎಸ್‌. ಯಡಿಯೂರಪ್ಪ, ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂಬುವುದಾಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಕಾರಣದಿಂದ ಅರ್ಜಿಗಳ ವಿಚಾರಣೆಯನ್ನು ಆ.30ಕ್ಕೆ ಮುಂದೂಡಿದ ನ್ಯಾಯಪೀಠ, ಅಲ್ಲಿಯವರೆಗೆ ಅರ್ಜಿಗಳ ಸಂಬಂಧ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.