ವಯನಾಡ್ ಗುಡ್ಡ ಕುಸಿತ ದುರಂತ: ರಾಜ್ಯ ಸರ್ಕಾರದಿಂದ 100 ಮನೆ ನಿರ್ಮಾಣಕ್ಕೆ ನೆರವು- ಸಿಎಂ ಘೋಷಣೆ

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿದಂತ ಭೀಕರ ಭೂ ಕುಸಿತದಿಂದ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಷ್ಟೇ ಜನರು ನಾಪತ್ತೆಯಾಗಿದ್ದಾರೆ. ಭೂ ಕುಸಿತದಿಂದ ತತ್ತರಿಸಿರುವಂತ ಕೇರಳ ರಾಜ್ಯಕ್ಕೆ ಕರ್ನಾಟಕ ಸರ್ಕಾರ ನೆರವಿನ ಹಸ್ತ ಚಾಚಿದೆ. 100 ಮನೆಗಳನ್ನು…

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿದಂತ ಭೀಕರ ಭೂ ಕುಸಿತದಿಂದ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಷ್ಟೇ ಜನರು ನಾಪತ್ತೆಯಾಗಿದ್ದಾರೆ. ಭೂ ಕುಸಿತದಿಂದ ತತ್ತರಿಸಿರುವಂತ ಕೇರಳ ರಾಜ್ಯಕ್ಕೆ ಕರ್ನಾಟಕ ಸರ್ಕಾರ ನೆರವಿನ ಹಸ್ತ ಚಾಚಿದೆ. 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಅಂತ ಹೇಳಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರ್ನಾಟಕ ಸರ್ಕಾರದಿಂದ 100 ಮನೆ ನಿರ್ಮಿಸಿಕೊಡುತ್ತೇವೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.