ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.26ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಸಂಬಂಧ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.26ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ಹೇಳಿದ್ದಾರೆ.
ನಗರದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment