ಬೆಂಗಳೂರು: ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಹಾಗೂ ತೆಲುಗು ನಟ ಪವನ್ ಕಲ್ಯಾಣ್ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿಯಾದರು.
ಪವನ್ ಕಲ್ಯಾಣ ಅವರು ವಿಧಾನಸೌಧದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಾನವ – ಆನೆ ಸಂಘರ್ಷ ನಿರ್ವಹಣೆ ಕುರಿತ ಅರಣ್ಯ ಇಲಾಖೆಯ ಸಭೆಯಲ್ಲಿ ಭಗಾವಹಿಸಲು ಬೆಂಗಳೂರಿಗೆ ಆಗಮಿಸಿದ್ದು, ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು.
ಆಂಧ್ರ ಪ್ರದೇಶ ಚುನಾವಣೆ ಗೆಲುವಿಗೆ ಮತ್ತು ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡ ,ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರಿಗೆ ಸಿಎಂ ಶುಭಾಶಯ ತಿಳಿಸಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment