ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕಾಪಿರೈಟ್ ಉಲ್ಲಂಘನೆ ಪ್ರಕರಣ ಸಂಬಂಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.
ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಚಿತ್ರದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಎಂಆರ್ ಟಿ ಮ್ಯೂಸಿಕ ಪಾಲುದಾರ ನವೀಕ್ ಕುಮಾರ್ ಎಂಬುವರು ದೂರು ನೀಡಿದ್ದು, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment