(E-kyc:) ರೇಷನ್ ಕಾರ್ಡ್ ಹೊಂದಿರುವವರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇರುತ್ತದೆ.
ಹೌದು, ಪಡಿತರ ಚೀಟಿ ಹೊಂದಿರುವವರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಸೆಪ್ಟೆಂಬರ್ ಅಂತ್ಯದೊಳಗೆ ಎಲ್ಲಾ ಸದಸ್ಯರು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಿಸಬಹುದಾಗಿದೆ. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಆಯುಕ್ತರ ಆದೇಶದಂತೆ ಕ್ರಮ ವಹಿಸಲಾಗುತ್ತದೆ ಎನ್ನಲಾಗಿದೆ.
ಇನ್ನು ರೇಷನ್ ಕಾರ್ಡ್ ನಲ್ಲಿ ಮೃತ ಸದಸ್ಯರ ಹೆಸರನ್ನು ಡಿಲೀಟ್ ಮಾಡಿಸದೇ ಇದ್ದಲ್ಲಿ ತುರ್ತಾಗಿ ಮರಣ ಪ್ರಮಾಣ ಪತ್ರದೊಂದಿಗೆ ಮಾಹಿತಿ ನೀಡಿ ಮೃತ ಸದಸ್ಯರ ಹೆಸರನ್ನು ವಜಾಗೊಳಿಸಬೇಕು. ಇಲ್ಲವಾದಲ್ಲಿ ನಿಯಮಾನಸಾರ ಕ್ರಮ ವಹಿಸಲಾಗುವುದು ಎನ್ನಲಾಗಿದೆ.