ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳನ್ನು ರಚಿಸಲು ಕೇಂದ್ರ ನಿರ್ಧಾರ – ಗೃಹ ಸಚಿವ ಅಮಿತ್ ಶಾ

ಲಡಾಖ್‌: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಹೊಸ ಜಿಲ್ಲೆಗಳ ರಚನೆಯು ಪ್ರತಿಯೊಂದು ಮೂಲೆ ಮೂಲೆಯಲ್ಲೂ ಆಡಳಿತವನ್ನು…

ಲಡಾಖ್‌: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.

ಹೊಸ ಜಿಲ್ಲೆಗಳ ರಚನೆಯು ಪ್ರತಿಯೊಂದು ಮೂಲೆ ಮೂಲೆಯಲ್ಲೂ ಆಡಳಿತವನ್ನು ಹೆಚ್ಚಿಸುವ ಮೂಲಕ ಜನರಿಗೆ ಸಿಗುವ ಪ್ರಯೋಜನಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುತ್ತದೆ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಅಮಿತ್ ಶಾ ಹೇಳಿದ್ದಾರೆ.

ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಲಡಾಖ್ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಈ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. ಈ ಜಿಲ್ಲೆಗಳು – ಝನ್ಸ್ಕಾರ್, ಡ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಆಗಿದೆ ಎಂದೂ ಉಲ್ಲೇಖಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.