ರಾಜ್ಯಾದ್ಯಂತ 3 ದಿನ ಭರ್ಜರಿ ಮಳೆ ಸಾಧ್ಯತೆ:10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ…

Heavy rain falls

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ.

ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಹಿದೆ. ಅದೇ ರೀತಿ ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

Vijayaprabha Mobile App free

ಅ.17 ರಿಂದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಜತೆಗೆ, ಉತ್ತರ ಒಳನಾಡಿನ ಜಿಲ್ಲೆಗಳಿಗೂ ಮಳೆ ವ್ಯಾಪಿಸಲಿದೆ. ಒಟ್ಟಾರೆ, ಅ.19ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.