ಸ್ಯಾನ್ಜೋಸ್: ಕೋಸ್ಟರಿಕಾದ ವಾಯುವ್ಯ ಪೆಸಿಫಿಕ್ ಕರಾವಳಿಯಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ.
ಕರಾವಳಿ ಪಟ್ಟಣವಾದ ಟ್ಯಾಮರಿಂಡೋದಿಂದ ವಾಯುವ್ಯಕ್ಕೆ ಸುಮಾರು 26 ಮೈಲಿಗಳು (41 ಕಿಮೀ) 11 ಮೈಲಿ (18 ಕಿಮೀ) ಪ್ರದೇಶದಲ್ಲಿ ಭೂಕಂಪ ಸಂಭವಿಸಿರುವುದಾಗಿ ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ತಿಳಿಸಿದೆ.
ಕೋಸ್ಟರಿಕಾದ ರಾಷ್ಟ್ರೀಯ ತುರ್ತು ಏಜೆನ್ಸಿ CNE, ಭೂಕಂಪದಿಂದ ಯಾವುದೇ ಹಾನಿ ಆಗಿಲ್ಲ ಎಂದು ತಿಳಿಸಿದೆ. ಕಳೆದ ಎರಡು ದಿನಗಳಿಂದಲೂ ಈ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ ಎನ್ನಲಾಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.