ಕಲ್ಬುರ್ಗಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ.
ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ರಾಠೋಡ್, ರೋಹಿತ್ ಹಾಗೂ ಕೃಷ್ಣ ಮೃತ ಯುವಕರು. ಇವರು ಲಾಡ್ಲಾಪುರ ಗ್ರಾಮದಿಂದ ತಾಂಡಾಕ್ಕೆ ಬೈಕ್‌ನಲ್ಲಿ ಹೋಗುತ್ತಿರುವಾಗ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗಳಿಂದ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment