ಇಟಾವಾ:  ಡಬಲ್ ಡೆಕ್ಕರ್ ಬಸ್ – ಕಾರು ಢಿಕ್ಕಿ; 7 ಸಾವು, 45ಕ್ಕೂ ಅಧಿಕ ಮಂದಿಗೆ ಗಾಯ

ಇಟಾವಾ: ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿ, 45ಕ್ಕೂ ಅಧಿಕ ಜನರಿಗೆ ಗಾಯವಾದ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್…

ಇಟಾವಾ: ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿ, 45ಕ್ಕೂ ಅಧಿಕ ಜನರಿಗೆ ಗಾಯವಾದ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಕಾರಿಗೆ ಢಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ 60 ಜನರಿದ್ದರು, ಈ ಪೈಕಿ 4 ಜನರು ಸಾವನ್ನಪ್ಪಿದ್ದಾರೆ. ಜೊತಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆಗ್ರಾದಿಂದ ಲಕ್ನೋಗೆ ತೆರಳುತ್ತಿದ್ದ ಕಾರೊಂದು ರಸ್ತೆಯ ಮಧ್ಯಭಾಗದಲ್ಲಿರುವ ನೆಟ್ ಡಿವೈಡರ್ ಅನ್ನು ದಾಟಿ ರಾಂಗ್ ಸೈಡ್‌ನಲ್ಲಿ ಬಂದಿದೆ. ಈ ವೇಳೆ ಬಸ್ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Vijayaprabha Mobile App free

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 15 ಮಂದಿ ಪ್ರಥಮ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.