Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy murder case)ಸಂಬಂಧ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿನ (charge sheet) ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಆರೋಪಿ ದರ್ಶನ್ (Actor Darshan) ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಹೌದು, ದರ್ಶನ್ ವಿರುದ್ಧ ಕೋರ್ಟ್ಗೆ ಸಲ್ಲಿಕೆ ಆದ ಚಾರ್ಜ್ಶೀಟ್ನ ವಿಚಾರಗಳ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿವೆ. ಈಗ ದರ್ಶನ್ ಇದಕ್ಕೆ ನಿರ್ಬಂಧ ಕೋರಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಈ ವಿಚಾರದಲ್ಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ದರ್ಶನ್ ಸೇರಿ ಒಟ್ಟು 17 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಆಗಿದೆ. ರೇಣುಕಾಸ್ವಾಮಿಯನ್ನು ಪತ್ತೆ ಮಾಡಿ ಬೆಂಗಳೂರಿಗೆ ಕರೆತಂದು ಆತನ ಮೇಲೆ ಯಾವ ರೀತಿ ಹಲ್ಲೆ ಮಾಡಲಾಗಿದೆ ಎಂಬ ಪೂರ್ಣ ವಿವರವನ್ನು ಚಾರ್ಜ್‌ಶೀಟ್‌ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.
https://vijayaprabha.com/again-opportunity-to-apply-for-new-ration-card/