ಮಲಯಾಳಂ ನಟ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು

ತಿರುವನಂತಪುರಂ: ಮಲಯಾಳಂ ಸ್ಟಾರ್ ನಟ ಫಹಾದ್ ಫಾಸಿಲ್ ವಿರುದ್ಧ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವು ದೂರು ದಾಖಲಿಸಿಕೊಂಡಿದೆ. ನಟ ನಿರ್ಮಾಪಕರಾಗಿರುವ ಫಹಾದ್ ಫಾಸಿಲ್ ನಿರ್ಮಾಣದ ‘ಪೇಯ್ನ್ ಕಿಲಿ’ ಸಿನಿಮಾದ ಚಿತ್ರೀಕರಣವು ಕೇರಳದ ಆಸ್ಪತ್ರೆಯೊಂದರಲ್ಲಿ ನಡೆದಿತ್ತು.…

ತಿರುವನಂತಪುರಂ: ಮಲಯಾಳಂ ಸ್ಟಾರ್ ನಟ ಫಹಾದ್ ಫಾಸಿಲ್ ವಿರುದ್ಧ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವು ದೂರು ದಾಖಲಿಸಿಕೊಂಡಿದೆ.

ನಟ ನಿರ್ಮಾಪಕರಾಗಿರುವ ಫಹಾದ್ ಫಾಸಿಲ್ ನಿರ್ಮಾಣದ ‘ಪೇಯ್ನ್ ಕಿಲಿ’ ಸಿನಿಮಾದ ಚಿತ್ರೀಕರಣವು ಕೇರಳದ ಆಸ್ಪತ್ರೆಯೊಂದರಲ್ಲಿ ನಡೆದಿತ್ತು. ಆದರೆ ಆಸ್ಪತ್ರೆಯಲ್ಲಿದ್ದವರಿಗೆ ತೊಂದರೆ ಕೊಟ್ಟಿದೆ ಎಂಬ ಕಾರಣಕ್ಕಾಗಿ ಮಾನವ ಹಕ್ಕುಗಳ ಆಯೋಗ ಫಹಾದ್ ವಿರುದ್ಧ ದೂರು ದಾಖಲಿಸಿದೆ.

ಚಿತ್ರೀಕರಣದ ವೇಳೆ ಚಿತ್ರತಂಡವು ರೋಗಿಗಳಿಗೆ ತೊಂದರೆ ಕೊಟ್ಟಿದೆ ಎಂದು ವರದಿಯಾಗಿದೆ. ಈ ವರದಿಗಳ ಆಧಾರದ ಮೇರೆಗೆ ಸ್ವಯಂ ಪ್ರಕರಣವನ್ನು ದಾಖಲಿಸಿಕೊಂಡ ಆಯೋಗವು, ಏಳು ದಿನಗಳಲ್ಲಿ ವಿವರಣೆ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

Vijayaprabha Mobile App free

ಚಿತ್ರೀಕರಣದ ವೇಳೆ ನಟರು ಸೇರಿದಂತೆ ಸುಮಾರು 50 ಮಂದಿ ಹಾಜರಿದ್ದು, ತುರ್ತು ಚಿಕಿತ್ಸಾ ಕೊಠಡಿಯನ್ನೂ ನಿರ್ಲಕ್ಷಿಸಿ ಶೂಟಿಂಗ್ ಹೆಸರಲ್ಲಿ ಚಿತ್ರತಂಡ ಗಲಾಟೆ ಮಾಡಿದೆ, ದೊಡ್ಡ ದೊಡ್ಡ ಲೈಟ್‌ಗಳನ್ನು ಹಾಕಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯಲ್ಲಿ ಕೆಲವು ನಿರ್ಬಂಧಗಳನ್ನು ಹಾಕಿ ಅಲ್ಲಿನ ಸಿಬ್ಬಂದಿ ಹಾಗೂ ರೋಗಿಗಳಿಗೆ ತೊಂದರೆ ಕೊಟ್ಟಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿರುವಾಗಲೇ ಚಿತ್ರದ ಶೂಟಿಂಗ್ ನಡೆದಿದೆ ಎಂದು ವರದಿಯಾಗಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.