Padmaja Rao: ಚೆಕ್ ಬೌನ್ಸ್ ಪ್ರಕರಣ (Check Bounce Case) ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ (Padmaja Rao) ಅವರಿಗೆ 3 ತಿಂಗಳು ಸಾಮಾನ್ಯ ಜೈಲು ಶಿಕ್ಷೆ (imprisonment) ಹಾಗೂ 40,20,000 ರೂ. ದಂಡ ವಿಧಿಸಿ ಮಂಗಳೂರಿನ 8ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಹೌದು, ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರು, ತನ್ನಿಂದ 41 ಲಕ್ಷ ರೂ. ಹಣ ಪಡೆದು, ಆ ಬಳಿಕ ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು 2021ರಲ್ಲಿ ಕೇಸು ದಾಖಲಿಸಿದ್ದರು. ಅವರು ಸಾಲ ಹಿಂತಿರುಗಿಸುವ ಸಂಬಂಧ ನೀಡಿದ ಚೆಕ್ ಬೌನ್ಸ್ ಆಗಿತ್ತು. ಬಳಿಕ ಕೇಸ್ ದಾಖಲಾಗಿತ್ತು.
ಜೈಲು ಶಿಕ್ಷೆ: ಪದ್ಮಜಾ ರಾವ್ ಪ್ರತಿಕ್ರಿಯೆ

ಹಿರಿಯ ನಟಿ ಪದ್ಮಜಾ ರಾವ್ ಅವರು ಸದ್ಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, 3 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪದ್ಮಜಾ ರಾವ್ ಅವರು, ಇದು 3 ವರ್ಷದ ಹಳೆಯ ಪ್ರಕರಣ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಸೆಷನ್ ಕೋರ್ಟ್‌ಗೆ ಅಪೀಲ್ ಹೋಗಿದ್ದೀನಿ. ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದ್ದು, ನಾನು ಯಾರಿಗೂ ಮೋಸ ಮಾಡಿಲ್ಲ. ಇಷ್ಟರಲ್ಲೇ ಸತ್ಯ ಎಲ್ಲರಿಗೂ ಗೊತ್ತಾಗಲಿದೆ ಎಂದಿದ್ದಾರೆ.
https://vijayaprabha.com/dr-bro-monthly-income-from-youtube/#google_vignette