ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಅಮಿತ್ ಶಾ, ಪ್ರಸಾರ ಖಾತೆ ಸಚಿವ ಅಶ್ವಿನಿ ವೈ ಷ್ಣವ್ ಅವರೊಂದಿಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ ಎಂದರು.
ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ. 1881ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ ನಡೆಸಲಾಗುತ್ತಿದೆ. ಜನಗಣತಿಯು 2020ರ ಏಪ್ರಿಲ್ 1ರಂದೇ ಆರಂಭವಾಗಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ ಮುಂದೂಡಲಾಗಿತ್ತು ಎಂದು ಹೇಳಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.