ಮಾಡೆಲ್‍ಗೆ ಕಿರುಕುಳ ಪ್ರಕರಣ- ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳು ಅಮಾನತು

ಅಮರಾವತಿ: ಮುಂಬೈ ಮೂಲದ ಮಾಡೆಲ್ ಒಬ್ಬರನ್ನು ಬಂಧಿಸಿ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಹಿರಿಯ ಐಪಿಎಸ್ ಅಧಿಕಾರಿಗಳಾದ ಪಿ. ಸೀತಾರಾಮ ಆಂಜನೆಯಲು, ಕ್ರಾಂತಿ ರಾಣಾ…

ಅಮರಾವತಿ: ಮುಂಬೈ ಮೂಲದ ಮಾಡೆಲ್ ಒಬ್ಬರನ್ನು ಬಂಧಿಸಿ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.

ಹಿರಿಯ ಐಪಿಎಸ್ ಅಧಿಕಾರಿಗಳಾದ ಪಿ. ಸೀತಾರಾಮ ಆಂಜನೆಯಲು, ಕ್ರಾಂತಿ ರಾಣಾ ಟಾಟಾ ಹಾಗೂ ಐಪಿಎಸ್ ಅಧಿಕಾರಿ, ವಿಜಯವಾಡದ ಮಾಜಿ ಡಿಸಿಪಿ ವಿಶಾಲ್ ಗುನ್ನಿ ಅಮಾನತುಗೊಂಡ ಅಧಿಕಾರಿಗಳು.

ನಟಿ ಹಾಗೂಮಾಡೆಲ್ ಕಾದಂಬರಿ ಜೆಟ್ವಾನಿ ಎನ್ನುವರು ತಮಗೆ ವಂಚಿಸಿದ್ದಾರೆ ಎಂದು ವೈ ಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಫೆಬ್ರುವರಿ 2 ರಂ ದು ಆಂಧ್ರ ಪೊಲೀ ಸರಿಗೆ ದೂರು ನೀಡಿದ್ದರು.

Vijayaprabha Mobile App free

ಈ ದೂರಿನ ಭಾಗವಾಗಿ ಪಿ. ಸೀತಾರಾಮ ಆಂಜನೆಯಲು ಅವರು ಕಾದಂಬರಿ ಅವರನ್ನು ಬಂ ಧಿಸಲು ತಮ್ಮ ಅಧೀನದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.ಆದರೆ, ಕಾದಂಬರಿ ತಮ್ಮ ಬಂಧನ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಕುರಿತು ಇಲಾಖಾ ತನಿಖೆ ನಡೆಸಿದಾಗ ಸೀತಾರಾಮ ಆಂಜನೆಯಲು, ಕಾಂತಿ ರಾಣಾ ಟಾಟಾ ಹಾಗೂವಿಶಾಲ್ ಗುನ್ನಿ ತಪ್ಪಿತಸ್ಥರೆಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.