(Anganwadi- Recruitment) ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ?:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ
* ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಸಲ್ಲಿಸಲು ಕಡ್ಡಾಯವಾಗಿ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು.
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. https://karnemakaone.kar.nic.in/abcd/home.aspx
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಅಕ್ಟೋಬರ್ 12 ರೊಳಗೆ ಆಸಕ್ತ ಆನ್ ಲೈನ್ ಅಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಕಚೇರಿ ವೇಳೆಯಲ್ಲಿ (ದೂ. ಸಂ. 08262-295749) ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಹಾಕಲು ಬೇಕಾಗುವ ದಾಖಲೆಗಳು
* ಪೋಟೋ
* ಆಧಾರ ಕಾರ್ಡ್
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ವಾಸಸ್ಥಳ ದೃಢೀಕರಣ ಪತ್ರ
* ಎಸ್.ಎಸ್.ಎಲ್.ಸಿ ಅಂಕಪಟ್ಟಿ (ಹೆಲ್ಪರ್ ಹುದ್ದೆಗೆ)
* ಪಿಯುಸಿ ಅಂಕಪಟ್ಟಿ (ಟೀಚರ್ ಹುದ್ದೆಗೆ)